ಐದು ರಾಜ್ಯಗಳ ಹೈಕೋರ್ಟ್‍ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕಕ್ಕೆ ಸುಪ್ರೀಂ ಕೊಲಿಜಿಯಂ ಶಿಫಾರಸು

ನವದೆಹಲಿ,ಏ.10- ರಾಜಸ್ಥಾನ, ಕೇರಳ, ಮೇಘಾಲಯ, ಆಂಧ್ರಪ್ರದೇಶ ಮತ್ತು ಛತ್ತೀಸ್‍ಘಡ ಹೈಕೋರ್ಟ್‍ಗಳಿಗೆ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಕ ಮಾಡಲು ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಎಸ್.ರಾಘವೇಂದ್ರಭಟ್, ಕೆರಳ ಉಚ್ಚ ನ್ಯಾಯಾಲಯ ನ್ಯಾಯಾಧೀಶ ಪಿ.ಆರ್.ರಾಮಚಂದ್ರ ಮೆನೂನ್, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‍ನ ನ್ಯಾಯಮೂರ್ತಿ ಎ.ಕೆ.ಮಿತ್ತಲ್, ಅಲಹಾಬಾದ್ ಉಚ್ಛ ನ್ಯಾಯಾಲಯದ ಜಡ್ಜ್ ವಿಕ್ರಮ್‍ನಾಥ್ ಮತ್ತು ಬಾಂಬೆ ಹೈಕೋರ್ಟ್ ನ್ಯಾಯಾಧೀಶ ಎ.ಎಸ್.ಒಕಾ ಅವರನ್ನು ಅನುಕ್ರಮವಾಗಿ ರಾಜಸ್ಥಾನ, ಕೇರಳ, ಮೇಘಾಲಯ, ಆಂಧ್ರಪ್ರದೇಶ ಮತ್ತು ಛತ್ತೀಸ್‍ಘಡ ಹೈಕೋರ್ಟ್‍ಗಳ ಮುಖ್ಯ ನ್ಯಾಯಾಧೀಶರನ್ನಾಗಿ ನೇಮಕ ಮಾಡಲು ಕೊಲಿಜಿಯಂ ಶಿಫಾರಸು ಮಾಡಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ