ಕೇಂದ್ರ ಸರ್ಕಾರ ಪ್ರೈವೇಟ್ ಕಂಪೆನಿ ರೀತಿ ಕಾರ್ಯನಿರ್ವಹಿಸುತ್ತಿದೆ-ಗೃಹ ಸಚಿವ ಎಂ.ಬಿ.ಪಾಟೀಲ್

ಹಾಸನ, ಏ.10-ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರೈವೇಟ್ ಕಂಪೆನಿ ಲಿ. ರೀತಿ ಕಾರ್ಯನಿರ್ವಹಿಸುತ್ತಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ವ್ಯಂಗ್ಯವಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ಯುವಕರಿಗೆ ಉದ್ಯೋಗಸೃಷ್ಟಿ, ರಾಮಮಂದಿರ ನಿರ್ಮಾಣ ಸೇರಿದಂತೆ ಹಲವುಕನಸಿನ ಆಶ್ವಾಸನೆಗಳನ್ನು ಜನರ ಮನದಲ್ಲಿ ಬಿತ್ತಿದ್ದರು. ಅಧಿಕಾರಕ್ಕೆ ಬಂದು ನೂರು ದಿನಗಳಲ್ಲಿ ಸ್ವಿಸ್ ಬ್ಯಾಂಕ್‍ನಲ್ಲಿರುವ ಕಪ್ಪು ಹಣವನ್ನು ತಂದು ಬಡವರ ಖಾತೆಗೆ 15 ಲಕ್ಷ ಹಾಕುತ್ತೇನೆ, ಉದ್ಯೋಗ ಸೃಷ್ಟಿಸುತ್ತೇನೆ ಎಂದು ಸುಳ್ಳು ಭರವಸೆ ನೀಡಿದ್ದು, ಇದುವರೆಗೂ ಯಾವ ಆಶ್ವಾಸನೆಯೂ ಈಡೇರಿಲ್ಲ ಎಂದು ಗುಡುಗಿದರು.

ನೋಟ್ ಬ್ಯಾನ್ ಮಾಡಿ ದೇಶದ ಆರ್ಥಿಕ ಸ್ಥಿತಿ ಅಧೋಗತಿಗೆ ತಲುಪಿದ್ದು, ಕೇಂದ್ರ ಸರ್ಕಾರದಲ್ಲಿ ಅಚ್ಚೇ ದಿನ್ ಆಯೇಗಾ, ಸಬ್ ಕೆ ಸಾಥ್ ಸಬ್ ಕಾ ವಿಕಾಸ್ ಎಂದಿದ್ದರು. ಇನ್ನೆಲ್ಲಿಂದ ಭಾರತ ವಿಕಾಸ ಕಂಡಿದೆ ಎಂದು ಲೇವಡಿ ಮಾಡಿದರು.

ಲೋಕಸಭಾ ಚುನಾವಣೆಯಲ್ಲಿ 18 ರಿಂದ 20 ಮೈತ್ರಿ ಅಭ್ಯರ್ಥಿಗಳು ಗೆಲ್ಲುವ ನಿರೀಕ್ಷೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ