ಖಂಡ್ರೆ ಪರ ವಿಜಯ ಸಿಂಗ್ ಪ್ರಚಾರ

ಬೀದರ್: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಅವರಿಗೆ ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕೆಂದು ವಿಧಾನ ಪರಿಷತ್ ಸದಸ್ಯ ವಿಜಯ ಸಿಂಗ್ ಅವರು ಮತದಾರರಲ್ಲಿ ಮನವಿ ಮಾಡಿದರು.

ಔರಾದ್ ತಾಲೂಕಿನ ದಾಬಕಾ ಗ್ರಾಮದಲ್ಲಿ ಜಿಲ್ಲಾ ಪಂಚಾಯತ್ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈಶ್ವರ ಖಂಡ್ರೆ ಅವರ ಗೆಲುವಿಗೆ ಎಲ್ಲ ಕಾರ್ಯಕರ್ತರು ಹಗಲಿರುಳು ಶ್ರಮಿಸಬೇಕಿದೆ ಎಂದರು.

ಕಾಂಗ್ರಸ್ ಮುಖಂಡ ಡಾ.ಭೀಮಸೇನರಾವ ಸಿಂಧೆ ಮಾತನಾಡಿ, ಈಶ್ವರ ಖಂಡ್ರೆ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಡಾ. ರಾಹುಲ್ ಆನಂದ ಚೌವ್ಹಾಣ್, ರಾಮ್ ನರೋಟೆ, ಸಂತೋಷ ಬಿರಾದಾರ ಸೇರಿದಂತೆ ಹಲವರು ಕಾರ್ಯಕರ್ತರಿದ್ದರು..

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ