ಬುರ್ಖಾಧಾರಿ ಮಹಿಳೆಯರಿಂದ ನಕಲಿ ಮತದಾನ: ಮುಖ ಪರಿಶೀಲನೆಗೆ ಬಿಜೆಪಿ ಅಭ್ಯರ್ಥಿ ಒತ್ತಾಯ

ಲಕ್ನೋ : ಬುರ್ಖಾಧಾರಿ ಮಹಿಳೆಯರು ನಕಲಿ ಮತದಾನ ಮಾಡುತ್ತಿದ್ದಾರೆ. ಅವರ ಗುರುತನ್ನು ಪರಿಶೀಲಸದೇ ಅವಕಾಶ ನೀದಲಾಗುತ್ತಿದೆ ಎಂದು ಉತ್ತರ ಪ್ರದೇಶದ ಮುಜಫ‌ರನಗರದ ಬಿಜೆಪಿ ಅಭ್ಯರ್ಥಿ ಸಂಜೀವ ಬಲ್ಯಾನ್‌ ಆರೋಪಿಸಿದ್ದು ವಿವಾದಕ್ಕೆ ಕಾರಣವಾಗಿದೆ.

ಬುರ್ಖಾಧರಿಸಿದ ಮಹಿಳೆಯರ ಗುರುತನ್ನು ಪರಿಶೀಲಿಸದೆಯೇ ಅವರಿಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಹಾಗಾಗಿ ಮುಜಫ‌ರನಗರದಲ್ಲಿ ನಕಲಿ ಮತದಾನ ನಡೆಯುತ್ತಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸದಿದ್ದಲ್ಲಿ ನಾನು ಮರು ಮತದಾನಕ್ಕೆ ಆಗ್ರಹಿಸುತ್ತೇನೆ ಎಂದು ಬಲ್ಯಾನ್‌ ಹೇಳಿದ್ದಾರೆ.

ಇಂದು ಬೆಳಗ್ಗೆ 7 ಗಂಟೆಗೆ ಉತ್ತರ ಪ್ರದೇಶದಲ್ಲಿ ಲೋಕಸಭೆಯ ಮೊದಲ ಹಂತದ ಚುನಾವಣೆ ಆರಂಭಗೊಂಡಿದ್ದು ಬಿರುಸಿನ ಮತದಾನ ಸಾಗುತ್ತಿದೆ.

ಬಲ್ಯಾನ್‌ ಅವರು ಆರ್‌ಎಲ್‌ಡಿ ಮುಖ್ಯಸ್ಥ ಅಜಿತ್‌ ಸಿಂಗ್‌ ವಿರುದ್ಧ ಚುನಾವಣಾ ಕಣದಲ್ಲಿ ಹೋರಾಡುತ್ತಿದ್ದಾರೆ. ಅಜಿತ್‌ ಸಿಂಗ್‌ ಅವರು ಉತ್ತರ ಪ್ರದೇಶದಲ್ಲಿನ ಎಸ್‌ಪಿ-ಬಿಎಸ್‌ಪಿ-ಆರ್‌ಎಲ್‌ಡಿ ಮಹಾ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದಾರೆ.

ಇದಕ್ಕೆ ಮೊದಲು ಬಲ್ಯಾನ್‌ ಅವರು ಸಾರ್ವಜನಿಕ ಸಭೆಯೊಂದರಲ್ಲಿ ಮತದಾರರಿಗೆ ಬೆದರಿಕೆ ಒಡ್ಡಿದ್ದಾರೆಂಬ ದೂರಿನ ಬಗ್ಗೆ ಉತ್ತರ ಪ್ರದೇಶದ ಮುಖ್ಯ ಚುನಾವಣಾಧಿಕಾರಿ ಮುಜಫ‌ರನಗರ ಜಿಲ್ಲಾ ಮ್ಯಾಜಿಸ್ಟ್ರೇಟರಿಂದ ವರದಿ ಕೇಳಿದ್ದರು.

BJP Muzaffarnagar Candidate Sanjeev Balyan Wants “Faces In Burqa” Checked

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ