ಲೋಕಸಭಾ ಚುನಾವಣೆ : ಪ್ರಥಮ ಹಂತದ ಮತದಾನ ಬಿರುಸಿನ ಪ್ರಾರಂಭ

ನವದೆಹಲಿ: ಉತ್ತರಪ್ರದೇಶ, ಆಂಧ್ರಪ್ರದೇಶ, ಬಿಹಾರ, ಜಮ್ಮು ಕಾಶ್ಮೀರ, ಮಹಾರಾಷ್ಟ್ರ, ಈಶಾನ್ಯ ರಾಜ್ಯಗಳು ಸೇರಿದಂತೆ ಒಟ್ಟು 18 ರಾಜ್ಯಗಳು ಮತ್ತು ಅಂಡಮಾನ್‌ ನಿಕೋಬಾರ್‌ ದ್ವೀಪ ಸಮೂಹ ಹಾಗೂ ಲಕ್ಷದ್ವೀಪಗಳ ಮತದಾರರು ಇಂದು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. ಈವರೆಗಿನ ವರದಿಗಳ ಪ್ರಕಾರ ಒಟ್ಟಾರೆ 11% ಮತದಾನವಾಗಿರುವ ಕುರಿತಾಗಿ ತಿಳಿದುಬಂದಿದೆ.

ಬೆಳಿಗ್ಗೆ 7ರಿಂದ ಸಾಯಂಕಾಲ 6 ತನಕ ಮತದಾನ ಮಾಡಲು ಅವಕಾಶವಿದೆ. ದೇಶದ ಈಶಾನ್ಯ ರಾಜ್ಯಗಳಲ್ಲಿ ಮತದಾನದ ಅವಧಿ ಬೆಳಿಗ್ಗೆ 7ರಿಂದ ಸಾಯಂಕಾಲ 5ರವರೆಗೆ ಇದ್ದು ಮಣಿಪುರ ಮತ್ತು ನಾಗಾಲ್ಯಾಂಡ್ರಾಜ್ಯಗಳಲ್ಲಿ ಸಾಯಂಕಾಲ 4 ಗಂಟೆಗೆ ಮತದಾನದ ಅವಧಿ ಮುಕ್ತಾಯಗೊಳ್ಳುತ್ತದೆ ಎಂದು ಚುನಾವಣಾ ಆಯೋಗವು ತಿಳಿಸಿದೆ.

ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಮತದಾನದ ಕೇಂದ್ರದ ಎದುರು ಸರತಿ ಸಾಲಿನಲ್ಲಿ ಕಾಯುತ್ತಿರುವುದು ಕಂಡುಬಂದಿದೆ. ಇನ್ನು ಉತ್ತರಪ್ರದೇಶದ ಕೆಲವು ಭಾಗಗಳಲ್ಲಿ ಇ.ವಿ.ಎಂ. ಸರಿಯಾಗಿ ಕಾರ್ಯನಿರ್ವಹಿಸದಿರುವ ಕುರಿತಾಗಿಯೂ ವರದಿಯಾಗಿದೆ.

ಇನ್ನು ಈ ಲೋಕಸಭಾ ಚುನಾವಣೆಯ ಜೊತೆಜೊತೆಗೆ ಆಂಧ್ರಪ್ರದೇಶ, ಒಡಿಸ್ಸಾ, ಸಿಕ್ಕಿಂ, ಅರುಣಾಚಲಪ್ರದೇಶ ರಾಜ್ಯಗಳಿಗೂ ಚುನಾವಣೆ ನಡೆಯುತ್ತಿದ್ದು ಈ ರಾಜ್ಯಗಳ ಮತದಾರರು ತಮ್ಮ ತಮ್ಮ ಕ್ಷೇತ್ರದ ಸಂಸದರನ್ನು ಹಾಗೂ ಶಾಸಕರನ್ನು ಆಯ್ಕೆ ಮಾಡಲು ಮತದಾನ ಮಾಡಬೇಕಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ