ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದೆ. ಆಂಧ್ರಪ್ರದೇಶದಲ್ಲಿ ಭಾರಿ ಹಿಂಸಾಚಾರದೊಂದಿಗೆ ರಕ್ತ ರಾಜಕೀಯದೊಂದಿಗೆ ಮತದಾನ ನಡೆದಿದೆ.
ಆಂಧ್ರಪ್ರದೇಶದಲ್ಲಿ ಚುನಾವಣೆ ವೇಳೆ ಹಲವೆಡೆ ಘರ್ಷಣೆ ಸಂಭವಿಸಿದ್ದು, ಮಾರಾಮಾರಿ ನಡೆದಿದೆ. ಆಂಧ್ರಪ್ರದೇಶದಲ್ಲಿ ಮೊದಲ ಹಂತದ ಚುನಾವಣೆಯಲ್ಲಿ ಭಾರಿ ಹಿಂಸಾಚಾರ ಕಂಡುಬಂತು. ತೆಲುಗುದೇಶಂ ಮತ್ತು ವೈಎಸ್ಆರ್ಪಿ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದ್ದರಿಂದ ಮೂವರು ಕಾರ್ಯಕರ್ತರು ಮೃತಪಟ್ಟಿದ್ದಾರೆ.
ಮೊದಲ ಹಂತದ ಚುನಾವಣೆಯಲ್ಲಿ 18 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ 91 ಕ್ಷೇತ್ರಗಳಲ್ಲಿ ಮತದಾನ ನಡೆಯಿತು. ಇದೇ ವೇಳೆ ಆಂಧ್ರಪ್ರದೇಶ, ಸಿಕ್ಕಿಂ, ಒಡಿಶಾ ವಿಧಾನಸಭೆಗೂ ಮತದಾನ ನಡೆಯಿತು.
ಒಟ್ಟು ಏಳು ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಮೇ 23ರಂದು ಮತ ಎಣಿಕೆ ನಡೆಯಲಿದೆ.