ದಾಖಲೆ ಪ್ರಮಾಣದಲ್ಲಿ ಮತ ಚಲಾಯಿಸಿ: ಪ್ರಧಾನಿ ಮೋದಿ ಮನವಿ

ನವದೆಹಲಿ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ದಾಖಲೆ ಪ್ರಮಾಣದಲ್ಲಿ ಮತ ಚಲಾಯಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತದಾರರಿಗೆ ಕರೆ ನೀಡಿದ್ದಾರೆ.

ಟ್ವೀಟರ್ ನಲ್ಲಿ ಮನವಿ ಮಾಡಿರುವ ಪ್ರಧಾನಿ ಮೋದಿ, ಇಂದು ಮೊದಲ ಹಂತದಲ್ಲಿ ಮತದಾನ ನಡೆಯುತ್ತಿರುವ ಕ್ಷೇತ್ರಗಳ ಮತದಾರರು ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿ, ವಿಶೇಷವಾಗಿ ಇದೇ ಮೊದಲ ಬಾರಿಗೆ ಮತಚಲಾಯಿಸುತ್ತಿರುವ ಯುವಜನರು ದೊಡ್ಡ ಪ್ರಮಾಣದಲ್ಲಿ ಮತ ಚಲಾಯಿಸಬೇಕು ಎಂದು ಮೋದಿ ಮನವಿ ಮಾಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಷಾ ಗುರುವಾರ ಬೆಳಗ್ಗೆ ಟ್ವೀಟ್​ ಮೂಲಕ ಮತದಾರರು ತಮ್ಮ ಹಕ್ಕು ಚಲಾಯಿಸಬೇಕು. ಪ್ರಜಾಪ್ರಭುತ್ವದ ಶಕ್ತಿ ನಿಮ್ಮ ಒಂದು ಮತದಲ್ಲಿ ಅಡಗಿದೆ. ನಿಮ್ಮ ಒಂದೊಂದು ಮತ ದೇಶದ ಭವಿಷ್ಯವನ್ನು ನಿರ್ಧರಿಸಲಿದೆ ಎಂದು ಮನವಿ ಮಾಡಿದ್ದಾರೆ.

ಮತ್ತೊಂದು ಟ್ವೀಟ್​ನಲ್ಲಿ ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲೆಂಡ್​, ಸಿಕ್ಕಿಂ ಮತ್ತು ತ್ರಿಪುರಾದ ನಮ್ಮ ಸಹೋದರ, ಸಹೋದರಿಯರು ದೊಡ್ಡ ಸಂಖ್ಯೆಯಲ್ಲಿ ಮತಚಲಾಯಿಸಬೇಕು ಎಂದು ಅಮಿತ್ ಷಾ ಕರೆ ನೀಡಿದ್ದಾರೆ.

Lok Sabha elections,PM Modi,Tweet

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ