ರಾಹುಲ್ ಗಾಂಧಿ ಮೇಲೆ ಲೇಜರ್ ಪಾಯಿಂಟ್: ಹತ್ಯೆಗೆ ನಡೆದಿತ್ತೇ ಸಂಚು…?

ಅಮೇಥಿ: ಉತ್ತರ ಪ್ರದೇಶದ ಅಮೇಥಿ ಲೊಕಸಭಾ ಕ್ಷೇತ್ರದಲ್ಲಿ ಚುನಾವಣ ಅಪ್ರಚಾರದ ವೇಳೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಮುಖದ ಮೇಲೆ ಬಿದ್ದ ಲೇಜರ್ ಪಾಯಿಂಟ್ ತೀವ್ರ ಆತಂಕಕ್ಕೆ ಕಾರಣವಾಗಿದ್ದು, ಅಮೇಥಿಯಲ್ಲಿ ರಾಹುಲ್ ಹತ್ಯೆಗೆ ಸಂಚು ರೂಪಿಸಲಾಗಿತ್ತೇ ಎಂಬ ಅನುಮಾನಗಳಿಗೆ ಕಾರಣವಾಗಿದೆ.

ರಾಹುಲ್ ಗಾಂಧಿ ಅವರ ಮುಖ ಹಾಗೂ ತಲೆಯ ಮೇಲೆ ಲೇಸರ್ ಗ್ರೀನ್ ಲೈಟ್ ಸುಮಾರು 7 ಬಾರಿ ಅತಿ ಕಡಿಮೆ ಅವಧಿಯಲ್ಲಿ ಬಿದ್ದಿರುವುದು ದೃಢವಾಗಿದೆ. ಈ ಹಿನ್ನಲೆಯಲ್ಲಿ ಉತ್ತರ ಪ್ರದೇಶದ ಅಮೇಥಿಯಲ್ಲಿ ರಾಹುಲ್ ಗೆ ಅಪಾಯವಿದ್ದು, ರ್ಯಾಲಿ ವೇಳೆ ಅವರ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದು ಕಾಂಗ್ರೆಸ್ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದೆ.

ಕಾಂಗ್ರೆಸ್ ಬರೆದಿರುವ ಪತ್ರದಲ್ಲಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಸಂದರ್ಭದಲ್ಲಿ 7 ಬಾರಿ ಅವರ ಮೇಲೆ ಲೇಸರ್ ಗ್ರೀನ್ ಲೈಟ್ ಬಿದ್ದಿದೆ ಎಂದು ಉಲ್ಲೇಖಿಸಿದೆ. ಈ ಬಗ್ಗೆ ತನಿಖೆ ನಡೆಸಬೇಕು ಹಾಗೂ ರಾಹುಲ್ ಅವರಿಗೆ ಸೂಕ್ತ ಭದ್ರತೆ ನೀಡಬೇಕು ಎಂದು ತಿಳಿಸಿದೆ.

ಲೇಸರ್ ಗ್ರೀನ್ ಲೈಟ್ ರಾಹುಲ್ ಗಾಂಧಿ ಅವರ ತಲೆ ಮೇಲೆ ಸುಮಾರು 7 ಬಾರಿ ಅತಿ ಕಡಿಮೆ ಅವಧಿಯಲ್ಲಿ ಬಿದ್ದಿರುವುದು ದೃಢವಾಗಿದೆ. ಅಲ್ಲದೇ ದೇವಾಲಯದ ಭೇಟಿ ಸಂದರ್ಭದಲ್ಲಿ ಅವರ ಎಡಭಾಗದ ತಲೆ ಮೇಲೆ 2 ಬಾರಿ ಲೇಸರ್ ಬೆಳಕು ಕಾಣಿಸಿತ್ತು ಎಂದು ವಿವರಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ವಿಡಿಯೋವನ್ನು ಕೂಡ ಕಾಂಗ್ರೆಸ್ ಗೃಹ ಸಚಿವಾಲಯಕ್ಕೆ ಪತ್ರದೊಂದಿಗೆ ನೀಡಿದೆ. ಈ ಪತ್ರದಲ್ಲಿ ಅಹ್ಮದ್ ಪಟೇಲ್, ಜೈರಾಮ್ ರಮೇಶ್, ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಸಹಿ ಇದೆ.

ರಾಹುಲ್ ಗಾಂಧಿ ಅವರ ರಕ್ಷಣೆಗೆ ಸಂಬಂಧಿಸಿದಂತೆ ಇಂತಹ ಘಟನೆ ಎಚ್ಚರಿಕೆಯ ಸಂದೇಶವಾಗಿರಬಹುದು ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಅಲ್ಲದೇ ಘಟನೆಯಿಂದ ನಾವು ಶಾಕ್‍ಗೆ ಒಳಗಾಗಿದ್ದು, ರಾಹುಲ್ ಗಾಂಧಿ ಅವರನ್ನ ಗುರಿಯಾಗಿಸಿ ಕೊಲೆ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಇಂದಿರಾ ಗಾಂಧಿ, ರಾಹುಲ್ ಗಾಂಧಿ ಅವರ ಹತ್ಯೆಯ ವೇಳೆ ಉಂಟಾಗಿದ್ದ ರಕ್ಷಣಾ ಲೋಪಗಳನ್ನು ಪ್ರಸ್ತಾಪಿಸಿ ರಕ್ಷಣೆಯ ಜವಾಬ್ದಾರಿ ಹೊಂದಿರುವ ಉತ್ತರ ಪ್ರದೇಶ ಸರ್ಕಾರದ ಆಡಳಿತದ ಅಪಾಯ ನಡೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

Rahul Gandhi, Amethi,Laser point, possibly from sniper gun

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ