ಬೆಂಗಳೂರು: ವಿರೋಧ ಪಕ್ಷಗಳ ನಾಯಕರು ಹಾಗೂ ಅವರ ಆಪ್ತರ ಮನೆ ಮೇಲೆ ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆ ದಾಳಿ ನಡೆಸುತ್ತಿದೆ. ಈ ದಾಳಿಗಳೆಲ್ಲಾ ರಾಜಕೀಯಪ್ರೇರಿತ ದಾಳಿ ಎಂದು ವಿರೋಧ ಪಕ್ಷಗಳ ನಾಯಕರು ಆರೋಪ ಮಾಡುತ್ತಿರುವ ಸಂದರ್ಭದಲ್ಲಿಯೇ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಆಪ್ತರ ಮನೆ ಮೇಲೆ ಐಟಿ ದಾಳಿ ನಡೆದಿದೆ.
ಉದ್ಯಮಿಗಳಾದ ಅಮಾನುಲ್ಲಾ ಖಾನ್, ಕಮಲ್ ಪಾಷಾ, ನಯೀಜ್ ಖಾನ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ಇಂದು ಬೆಳಗ್ಗೆ 6 ಗಂಟೆಗೆ ಐಟಿ ದಾಳಿ ನಡೆಸಲಾಗಿದೆ. 20ಕ್ಕೂ ಹೆಚ್ಚು ಕಡೆ 100ಕ್ಕೂ ಹೆಚ್ಚು ಅಧಿಕಾರಿಗಳು ಪರಿಶೀಲನಾ ಕಾರ್ಯ ನಡೆಸುತ್ತಿದ್ದಾರೆ.
ಬೆಂಗಳೂರು ಪ್ಯಾಲೇಸ್ ಡೆಕೋರೇಷನ್ ಮಾಡುವ ಅಮಾನುಲ್ಲಾ ಖಾನ್, ಗೋಲ್ಡನ್ ಆರ್ಚರಿ ಮಾಲೀಕ ಕಮಲ್ ಪಾಷಾ ಹಾಗೂ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುವ ನಯೀಜ್ ಖಾನ್ ಮನೆ ಮೇಲೆ ಐಟಿ ದಾಳಿ ನಡೆದಿದೆ.