ಆಂಧ್ರದಲ್ಲಿ ಮತದಾನದ ವೇಳೆ ಟಿಡಿಪಿ-ವೈಎಸ್ ಆರ್ ಕಾಂಗ್ರೆಸ್ ಮಾರಾಮಾರಿ; ಇಬ್ಬರು ಕಾರ್ಯಕರ್ತರು ಸಾವು

ಅಮರಾವತಿ: ಆಂಧ್ರ ಪ್ರದೇಶದ 25 ಲೋಕಸಭಾ ಮತ್ತು 175 ವಿಧಾನಸಭಾ ಸ್ಥಾನಗಳಿಗೆ ಇಂದು ಏಕಕಾಲದಲ್ಲಿ ಮತದಾನ ನಡೆಯುತ್ತಿದ್ದು, ಮತದಾನದ ವೇಳೆ ತೆಲುಗು ದೇಶಂ ಪಕ್ಷ ಮತ್ತು ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರ ಪರಸ್ಪರ ಮಾರಾಮಾರಿ ನಡೆದಿದ್ದು, ಇಬ್ಬರು ಕಾರ್ಯಕರ್ತರು ಮೃತಪಟ್ಟಿದ್ದಾರೆ.

ಅನಂತಪುರ ಜಿಲ್ಲೆಯ ತಾಡಪತ್ರಿ ಕ್ಷೇತ್ರದ ಮೀರಾಪುರಂನ ಮತಗಟ್ಟೆ 197ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಗಲಾಟೆಯಲ್ಲಿ ಟಿಡಿಪಿ ಕಾರ್ಯಕರ್ತ ಸಿದ್ಧ ಭಾಸ್ಕರ್​ ರೆಡ್ಡಿ ಹಾಗೂ ವೈಎಸ್​ಆರ್​ ಕಾರ್ಯಕರ್ತ ಪುಲ್ಲಾರೆಡ್ಡಿ ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶದಲ್ಲಿ ಮೊದಲು ಶಾಂತಿಯುತವಾಗಿಯೇ ಮತದಾನ ಪ್ರಾರಂಭವಾಯಿತು. ಅಧಿಕ ಸಂಖ್ಯೆಯಲ್ಲಿ ಮತದಾರರೂ ಮುಂಜಾನೆಯೇ ಆಗಮಿಸಿದರು. ಆದರೆ ಗುಂಟೂರು ಮತ್ತು ಚಿತ್ತೂರಿನಲ್ಲಿ ಮಾತ್ರ ವೈಎಸ್​ಆರ್​ ಹಾಗೂ ಟಿಡಿಪಿ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಬೆಳೆದು ಅದು ನಂತರ ಹಿಂಸಾಚಾರಕ್ಕೆ ತಿರುಗಿತು. ಇವಿಎಂಗಳೂ ನಾಶಗೊಂಡವು.

ಮೀರಾಪುರಂ ಗ್ರಾಮದ ಮತಗಟ್ಟೆಯ ಬಳಿ ಎರಡೂ ಪಕ್ಷಗಳ ಕಾರ್ಯಕರ್ತರ ವಾಗ್ವಾದ ತೀವ್ರಗೊಂಡು ಪರಸ್ಪರ ಕಲ್ಲು ತೂರಾಟ ನಡೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

2 Party Workers Killed After TDP And YSR Congress Workers Clash In Andhra’s Anantapur

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ