ರಾಜ್ಯದಲ್ಲಿ 24 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ-ಮಾಜಿ ಸಿ.ಎಂ.ಜಗದೀಶ್ ಶೆಟ್ಟರ್

ಹುಬ್ಬಳ್ಳಿ, ಏ.11- ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ 24 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬೈ ಕರ್ನಾಟಕ ಭಾಗದಲ್ಲಿ 7 ಸ್ಥಾನಗಳನ್ನು ಗೆಲ್ಲುತ್ತೇವೆ. ಕಲಬುರ್ಗಿಯಲ್ಲಿ ಉಮೇಶ್ ಜಾಧವ್ ಅವರು ಖರ್ಗೆಗೆ ಪ್ರಬಲ ಪೈಪೋಟಿ ನೀಡುತ್ತಿರುವುದರಿಂದ ಖರ್ಗೆ ಅವರು ಟೆಂಪಲ್ ರನ್ ಕೈಗೊಂಡಿದ್ದಾರೆ.

ಮಂಡ್ಯದಲ್ಲಿ ಸುಮಲತಾ ಅವರ ಜಯ ಖಚಿತವಾಗಿರುವುದರಿಂದ ಸುಮಲತಾ ಹೆಸರಿನ ಮೂವರನ್ನು ಕಣಕ್ಕಿಳಿಸಲಾಗಿದೆ. ಅದೇ ರೀತಿ ಕಲಬುರ್ಗಿಯಲ್ಲಿ ಮೂವರು ಜಾಧವ್ ಅವರನ್ನು ನಿಲ್ಲಿಸಿದ್ದಾರೆ ಎಂದರು.

ಬಳ್ಳಾರಿ ಕ್ಷೇತ್ರದಲ್ಲಿ ನಾವು ಅತಿ ಹೆಚ್ಚು ಮತಗಳಿಂದ ಗೆಲ್ಲುತ್ತೇವೆ. ಮತ್ತೊಮ್ಮೆ ಮೋದಿ ಪ್ರಧಾನಿಯಾಗಬೇಕೆಂದು ದೇಶದ ಮತದಾರರು ನಿರ್ಧರಿಸಿದ್ದಾರೆ.
ಯುವ ಮತದಾರರು ಮೋದಿಗೆ ಮತ ಹಾಕಲು ಕಾತರರಾಗಿದ್ದಾರೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ