ಅಮೇಥಿಯಿಂದ ಸಚಿವೆ, ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ನಾಮಪತ್ರ ಸಲ್ಲಿಕೆ

ಲಕ್ನೋ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಇಂದು ವಿಶೇಷ ಪೂಜೆ ಸಲ್ಲಿಸಿ, ಬಳಿಕ ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಸ್ಮೃತಿ ಇರಾನಿ ಅವರು ಪತಿ ಜುಬಿನ್ ಇರಾನಿ ಜೊತೆಗೆ ಪೂಜೆ ಸಲ್ಲಿಸಿದರು. ಬಳಿಕ ಅಮೇಥಿ ನಗರದಲ್ಲಿ ರೋಡ್ ಶೋ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸ್ಥಳೀಯ ಬಿಜೆಪಿ ಶಾಸಕರು, ಮುಖಂಡರು, ಕಾರ್ಯಕರ್ತರು ರೋಡ್ ಶೋನಲ್ಲಿ ಭಾಗವಹಿಸಿದ್ದರು.

ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಸ್ಮೃತಿ ಇರಾನಿ ಅವರು, ಈ ಭಾಗದ ಜನರ ಸೇವೆ ಮಾಡಲು ಹೆಚ್ಚಿನ ಆಕಾಂಕ್ಷೆ ಹೊಂದಿದ್ದೇನೆ. ಹೀಗಾಗಿ ಮತದಾರರು ಕೈಹಿಡಿಯುತ್ತಾರೆ ಎನ್ನುವ ವಿಶ್ವಾಸವಿದೆ. ದೇಶದ ಜನರ ಆಶೀರ್ವಾದದಿಂದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಮತ್ತೆ ಸ್ಪರ್ಧೆಗೆ ಇಳಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಇದು ಪಕ್ಷದ ನಿರ್ಧಾರವಾಗಿದೆ. ಈ ಬಾರಿ ಅಮೇಥಿ ಕ್ಷೇತ್ರದಲ್ಲಿ ಪ್ರತಿಯೊಬ್ಬ ಕಾರ್ಯಕರು ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ. ಹೀಗಾಗಿ ಭಾರೀ ಪೈಪೋಟಿ ನಡೆಯಲಿದೆ ಎಂದರು.

Union Minister and BJP leader Smriti Irani files her nomination from Amethi

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ