ಜಲಮಂಡಳಿಯಿಂದ ನಾಳೆ ನೀರಿನ ಅದಾಲತ್

ಬೆಂಗಳೂರು, ಏ.11- ಬೆಂಗಳೂರು ಜಲಮಂಡಲಿಯ ಸಕಾನಿಅ (ಪೂರ್ವ-2) ಉಪವಿಭಾಗದಲ್ಲಿನಾಳೆ ಬೆಳಗ್ಗೆ 9.30ರಿಂದ 11ಗಂಟೆಗೆ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆಗೆ ಪರಿವರ್ತನೆ ವಿಳಂಬ ಮತ್ತಿತರ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ನೀರಿನ ಅದಾಲತ್ ನಡೆಸಲಾಗುತ್ತದೆ.

ಸಕಾನಿಅ (ಪೂರ್ವ-2) ಉಪವಿಭಾಗ ವ್ಯಾಪ್ತಿಯ ಎ.ಇ,ಸಿ,ಎಸ್. ಲೇಔಟ್, ಹೂಡಿ, ಭುವನೇಶ್ವರಿನಗರ ಸೇವಾ ಠಾಣೆ ವ್ಯಾಪ್ತಿಯ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಬಿ.ಇ.ಎಂ.ಎಲ್ ಲೇಔಟ್, ಐ.ಟಿ.ಪಿ.ಎಲ್, ಕುಂದಲಹಳ್ಳಿ ಮುಖ್ಯ ರಸ್ತೆ ಹತ್ತಿರ. ಇಲ್ಲಿನ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು (ಪೂರ್ವ-2) ಕಚೇರಿಯಲ್ಲಿ ಪರಿಶೀಲಿಸಿ ಬಗೆಹರಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: ಕಾರ್ಯ ನಿರ್ವಾಹಕ ಅಭಿಯಂತರರು (ಪೂರ್ವ): 22945158. ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು (ಪೂರ್ವ-2) ಉಪವಿಭಾಗ: 22945115.

ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಮಂಡಲಿಯ 24/7 ದೂರು ನಿರ್ವಹಣಾ ಕೇಂದ್ರದ ದೂರವಾಣಿ ಸಂಖ್ಯೆ:22238888, ಸಹಾಯವಾಣಿ 1916 ಹಾಗೂ ವಾಟ್ಸ್‍ಆಪ್ ಸಂಖ್ಯೆ:8762228888 ಗೆ ಸಂಪರ್ಕಿಸಬಹುದಾಗಿದೆ.

ಸಾರ್ವಜನಿಕರು ಮೇಲಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಈ ನೀರಿನ ಅದಾಲತ್ ಸೌಲಭ್ಯವನ್ನು ಬಳಸಿಕೊಳ್ಳ ಬಹುದಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ