ರಫೇಲ್ ಕುರಿತು ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಸುಪ್ರೀಂನಲ್ಲಿ ದಾವೆ ಹೋಡಿದ ಬಿಜೆಪಿ ಸಂಸದೆ

ನವದೆಹಲಿ, ಏ.12-ರಫೇಲ್ ಯುದ್ದ ವಿಮಾನ ಖರೀದಿ ಒಪ್ಪಂದ ಕುರಿತು ಸುಪ್ರೀಂಕೋರ್ಟ್‍ನ ಇತ್ತೀಚಿನ ತೀರ್ಪಿನ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ವಿರುದ್ಧ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಸುಪ್ರೀಂಕೋರ್ಟ್‍ನಲ್ಲಿ ದಾವೆ ಹೂಡಿದ್ದಾರೆ. ರಾಹುಲ್ ವಿರುದ್ಧ ನ್ಯಾಯಾಲಯ ನಿಂದನೆ ಕ್ರಮ ಜರುಗಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಈ ಕುರಿತ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಯ್ ನೇತೃತ್ವದ ಪೀಠ ಇದರ ಮುಂದಿನ ವಿಚಾರಣೆಯನ್ನು ಏ.15ರಂದು ನಡೆಸುವುದಾಗಿ ತಿಳಿಸಿದೆ.

ಸುಪ್ರೀಂಕೋರ್ಟ್ ಚೌಕಿದಾರ್ ಚೋರ್ ಹೈ ಎಂದು ತನ್ನ ತೀರ್ಪಿನಲ್ಲಿ ಹೇಳಿರುವುದಾಗಿ ರಾಹುಲ್ ನೀಡಿದ್ದ ಹೇಳಿಕೆ ವಿರುದ್ಧ ಮೀನಾಕ್ಷಿ ಲೇಖಿ ಸುಪ್ರೀಂನಲ್ಲಿ ದಾವೆ ಸಲ್ಲಿಸಿದ್ಧಾರೆ. ಬಿಜೆಪಿ ಸಂಸದರ ಪರ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡಿಸಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ