ದಲೈಲಾಮಾ ಆರೋಗ್ಯ ಸುಧಾರಣೆ; ಆಸ್ಪತ್ರೆಯಿಂದ ಡಿಸ್ಚಾರ್ಜ್

ನವದೆಹಲಿ, ಏ.12- ಕೆಲವು ದಿನಗಳ ಹಿಂದೆ ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಟಿಬೆಟ್ ಆಧ್ಯಾತ್ಮಕ ನಾಯಕ ದಲೈಲಾಮಾ ಅವರ ಆರೋಗ್ಯ ಸುಧಾರಿಸಿದ್ದು ಇಂದು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

83 ವರ್ಷದ ವಿಶ್ವಮಟ್ಟದ ಶಾಂತಿಧೂತರಾಗಿರುವ ದಲೈಲಾಮಾ ಅವರು, ಕಳೆದ 4 ದಿನಗಳಿಂದ ನವದೆಹಲಿಯ ಖಾಸಗಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನೊಬೆಲ್ ಪುರಸ್ಕøತ ದಲೈಲಾಮಾರ ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ಕಳೆದ ಮಂಗಳವಾರ ಕರೆ ತರಲಾಗಿತ್ತು ಎಂದು ಆಸ್ಪತ್ರೆಯ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಎದೆ ಸಂಬಂಧಿತ ಸೊಂಕಿನಿಂದ ದಲೈಲಾಮಾಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಸಧ್ಯ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ