ಅರ್ಚಕರ ಮನೆ ಮೇಲೆ ಐಟಿ ದಾಳಿ

ಹಾಸನ, ಏ.12- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಅಧಿಕಾರಿಗಳ ದಾಳಿ ಮುಂದುವರಿದಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹುಟ್ಟೂರಿನಲ್ಲಿ ಈಶ್ವರ ದೇವಸ್ಥಾನದ ಅರ್ಚರ ಮನೆಯಲ್ಲೂ ಪರಿಶೀಲನೆ ನಡೆಸಿದ್ದಾರೆ.

ಹರದನಹಳ್ಳಿಯಲ್ಲಿರುವ ಈಶ್ವರ ದೇವಸ್ಥಾನ ದೇವೇಗೌಡರ ಕುಲದೇವರಾಗಿದ್ದು, ಅದರ ಅರ್ಚಕ ಪ್ರಕಾಶ್ ಭಟ್ ಅವರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೊನೆಗೆ ದೇವಸ್ಥಾನ ಪ್ರಾಗಂಣವನ್ನು ಬಿಡದೇ ಶೋಧ ನಡೆಸಿದ್ದಾರೆ.

ಚುನಾವಣೆ ವೇಳೆ ಅರ್ಚರ ಮನೆಯಲ್ಲಿ ಹಣ ಅಡಗಿಸಿಟ್ಟರಬಹುದು ಎಂಬ ಅನುಮಾನದಿಂದ ಪರಿಶೀಲನೆ ನಡೆಸಿರಬಹುದೆಂಬ ಚರ್ಚೆಗಳು ನಡೆಯುತ್ತಿವೆ. ಸುದೀರ್ಘ ತಪಾಸಣೆ ನಂತರವೂ ಏನು ಸಿಗದೇ ಆದಾಯ ತೆರಿಗೆ ಅಧಿಕಾರಿಗಳು ಬರಿಗೈನಲ್ಲಿ ವಾಪಸ್ ತೆರಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ