ಬೆಂಗಳೂರು, ಏ.13-ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ನೀಡಲು ಕರ್ನಾಟಕ ರಾಜ್ಯ ಸವಿತಾ ಸಮಾಜ ತೀರ್ಮಾನಿಸಿದೆ.
ಸುದ್ದಿಗೋಷ್ಠಿಯಲ್ಲಿ ಸಮಾಜದ ರಾಜ್ಯಾಧ್ಯಕ್ಷ ಯು.ಕೃಷ್ಣಮೂರ್ತಿ ಮಾತನಾಡಿ ನಮ್ಮ ಸಮಾಜ ಆರ್ಥಿಕ ,ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದು ನಮ್ಮ ಸಮಾಜದ ಉಳಿವು ಹಾಗೂ ಉನ್ನತಿಗೆ ಮೈತ್ರಿ ಸರ್ಕಾರ ಸಹಕಾರ ನೀಡುತ್ತಾ ಬಂದಿದೆ ಎಂದು ತಿಳಿಸಿದರು.
ಸಮ್ಮಿಶ್ರ ಸರ್ಕಾರದ ಹಿರಿಯ ಮುಂಖಡರನ್ನು ಭೇಟಿಯಾಗಿ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ರೂಪಿಸಲು ಮನವಿ ಮಾಡಿದಾಗ, ನಮ್ಮ ಮನವಿ ಸ್ವೀಕರಿಸಿ ಸ್ಪಂದಿಸಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಸವಿತಾ ಮಹರ್ಷಿ ಜಯಂತಿಯನ್ನು ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಆಚರಿಸಲು ತೀರ್ಮಾನಿಸಲಾಯಿತು. 2019-20ಸಾಲಿನ ಮುಂಗಡ ಪತ್ರದಲ್ಲಿ ಸವಿತಾ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದಾರೆ ಎಂದು ತಿಳಿಸಿದರು.
ನಮ್ಮ ಸಮಾಜದ ಅಭಿವೃದ್ಧಿಗೆ ಸ್ಪಂದಿಸಿರುವ ಮೈತ್ರಿ ಸರ್ಕಾರವನ್ನು ಬೆಂಬಲಿಸಿ ಈ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಎಲ್ಲಾ ಮೈತ್ರಿ ಅಭ್ಯರ್ಥಿಗಳಿಗೆ ಮತ ನೀಡಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.