ಕೋಲ್ಕತ: ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಲ್ಯಾಂಡ್ ಆಗಲು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಅವಕಾಶ ನಿರಾಕರಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯನ್ನು ರದ್ದುಗೊಳಿಸಲಾಗಿದೆ.
ಡಾರ್ಜಿಲಿಂಗ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಮತ್ತು ಕಾಂಗ್ರೆಸ್ನ ಹಿರಿಯ ನಾಯಕ ಶಂಕರ್ ಮಲಕರ್ ಅವರು ಏಪ್ರಿಲ್ 14ರಂದು ಸಿಲಿಗುರಿಯ ಪೊಲೀಸ್ ಗ್ರೌಂಡ್ನಲ್ಲಿ ರಾಹುಲ್ ಹೆಲಿಕಾಪ್ಟರ್ ಇಳಿಸಲು ಅನುಮತಿ ಕೋರಿ ಮನವಿ ಸಲ್ಲಿಸಿದ್ದರು. ಆದರೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.
ಈ ಕುರಿತು ಸಿಲಿಗುರಿ ಪೊಲೀಸ್ ಆಯುಕ್ತ ಬಿ.ಎಲ್. ಮೀನಾ ಅವರು ಸ್ಪಷ್ಟನೆ ನೀಡಿದ್ದು, ಕೆಲವು ನಿಯಮಾವಳಿಗಳ ಅನ್ವಯ ಹೆಲಿಕಾಪ್ಟರ್ ಲ್ಯಾಂಡ್ ಗೆ ಅನುಮತಿ ನಿರಾಕರಿಸಲಾಗಿದೆ. ಆದರೆ ಕಾಂಗ್ರೆಸ್ನವರು ಬೇರೆ ಸ್ಥಳದಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಮಾಡಲು ಅನುಮತಿ ಕೋರಿ ಮನವಿ ಸಲ್ಲಿಸಿಲ್ಲ ಎಂದು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ರಾಹುಲ್ ಗಾಂಧಿ ಎರಡು ಕಡೆಗಳಲ್ಲಿ, ಮಾಲ್ಡಾ ಮತ್ತು ರಾಯ್‌ಗಂಜ್‌ನಲ್ಲಿ ಚುನಾವಣೆ ಪ್ರಚಾರ ನಡೆಸಲಿದ್ದಾರೆ.
West Bengal govt denies permission for Rahul chopper to land, poll meeting cancelled