ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಜನ್ಮದಿನ: ಪ್ರಧಾನಿ, ರಾಷ್ಟ್ರಪತಿ ಗೌರವ ನಮನ

ನವದೆಹಲಿ: ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರ 128ನೇ ಜನ್ಮದಿನ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯಾತಿಗಣ್ಯರು ಅಂಬೇಡ್ಕರ್ ಅವರಿಗೆ ಗೌರವ ವಂದನೆ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ನಾನು ಭಾರತೀಯ ಸಂವಿಧಾನ ಶಿಲ್ಪಿಸಾಮಾಜಿಕ ನ್ಯಾಯಕ್ಕಾಗಿ ಕೆಲಸ ಮಾಡಿದ ವ್ಯಕ್ತಿ – ಡಾ ಭೀಮರಾವ್ ಅಂಬೇಡ್ಕರ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ” ಎಂದು ಹೇಳಿದ್ದಾರೆ.

ಇದೇ ವೇಳೆ ಅಂಬೇಡ್ಕರ್ ನನಗೆ ಸೇರಿದಂತೆ ಕೋಟ್ಯಾಂತರ ಜನರಿಗೆ ಸ್ಪೂರ್ತಿಯಾಗಿದ್ದರು.ಒಬ್ಬ ಶ್ರೀಮಂತ ಕುಟುಂಬದಲ್ಲಿ ಮಾತ್ರವೇ ಜನಿಸಿ ದೊಡ್ಡ ವ್ಯಕ್ತಿಯಾಗಬೇಕಿಲ್ಲ, ಭಾರತದಲ್ಲಿ ಬಡ ಕುಟುಂಬದಲ್ಲಿ ಜನಿಸಿದ ವ್ಯಕ್ತಿಯು ಸಹ ದೊಡ್ಡ ಕನಸು ಕಾಣಬಹುದು, ಅವುಗಳನ್ನು ನನಸಾಗಿಸಿಕೊಳ್ಳಬಹುದು ಎಂದು ಮೋದಿ ವೀಡಿಯೋ ಒಂದನ್ನು ಹಂಚಿಕೊಳ್ಳುವ ಮೂಲಕ ಹೇಳಿದ್ದಾರೆ.

Ambedkar Jayanti 2019: PM Modi, President Kovind Pay Tributes

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ