ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ ಶತೃಘ್ನ ಸಿನ್ಹಾ

ನವದಹೆಲಿ: ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವ ರೆಬೆಲ್ ನಟ ಶತೃಘ್ನ ಸಿನ್ಹಾ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸ್ಪರ್ಧಿಸಲು ತಾವು ಸಿದ್ಧ. ಮೋದಿ ವಿರುದ್ಧ ಸ್ಪರ್ಧಿಸಲು ನನಗೆ ತುಂಬಾ ಖುಷಿಯಾಗುತ್ತದೆ ಎಂದು ಹೇಳಿದ್ದಾರೆ.

ಬಿಹಾರದ ಪಾಟ್ಮಾ ಸಾಹಿಬ್ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಟಿಕೆಟ್ ಪಡೆದಿರುವ ಶತೃಘ್ನ ಸಿನ್ಹಾ ಇದೀಗ ತಾವು ಪ್ರಧಾನಿ ನರೇಂದ್ರ ಮೋದಿ ವಿರುದ್ಧವೂ ಸ್ಪರ್ಧಿಸಲು ಸಿದ್ಧ ಎಂದಿದ್ದಾರೆ. ಅವಕಾಶ ಸಿಕ್ಕರೆ ಮೋದಿ ವಿರುದ್ಧ ಸ್ಪರ್ಧೆ ಮಾಡುತ್ತೇನೆ ಎಂದಿದ್ದಾರೆ.

ಇದೇ ವೇಳೆ ಬಿಜೆಪಿಯವರು ಮೂರ್ಖರೊಂದಿಗೆ ಬದುಕುತ್ತಿದ್ದಾರೆ. ಅವರು ಹಾಗೆಯೇ ಇರಲಿ ಬಿಡಿ.. ಪಾಟ್ನಾ ಸಾಹಿಬ್ ಜನತೆ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಪಾಟ್ನಾ ಸಾಹಿಬ್ ಕ್ಷೇತ್ರದಿಂದ ಕಳೆದ 2 ಬಾರಿ ಆರಿಸಿ ಬಂದಿದ್ದ ಶತೃಘ್ನ ಸಿನ್ಹಾ ಅವರಿಗೆ ಹಾಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಹೀಗಾಗಿ ಶತೃಘ್ನ ಸಿನ್ಹಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.

congress candidate shatrughan sinha said he will be happy in contesting against PM Modi

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ