ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು, ಏ.14- ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾದ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟವಾಗಲಿದ್ದು ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಈ ಬಾರಿ ಸಿಇಟಿ ಪರೀಕ್ಷೆಗೂ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುತ್ತಿರುವುದು ವಿಶೇಷ. ನಾಳೆ ಬೆಳಗ್ಗೆ 11 ಗಂಟೆಗೆ ಪಿಯು ಮಂಡಳಿಯಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನ 12 ಗಂಟೆಗೆ ವೆಬ್ ಸೈಟ್‍ನಲ್ಲಿ ಫಲಿತಾಂಶ ಹೊರ ಬರಲಿದ್ದು, ಮಂಗಳವಾರ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಈ ಬಾರಿ ಒಟ್ಟು 6.50 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು.ಮಾರ್ಚ್ 1 ರಿಂದ ಮಾ.17ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು.ಸದ್ಯ ಫಲಿತಾಂಶಕ್ಕೆ ಪಿಯುಸಿ ಬೋರ್ಡ್ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ.ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಫಲಿತಾಂಶ ಪ್ರಕಟ ಮಾಡಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ