ಆಜಂ ಖಾನ್ ಅಂಥವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು: ಜಯಪ್ರದಾ

ರಾಂಪುರ: ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡುವ ಸಮಾಜವಾದಿ ಪಕ್ಷದ ಅಜಂ ಖಾನ್​ ಅಂಥವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವನ್ನೇ ನೀಡಬಾರದು ಎಂದು ಬಿಜೆಪಿ ಅಭ್ಯರ್ಥಿ, ಹಿರಿಯ ನಟಿ ಜಯಪ್ರದಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಜಯಪ್ರದಾ, ಇಂಥವರು ಗೆದ್ದರೆ ಪ್ರಜಾತಂತ್ರ ವ್ಯವಸ್ಥೆಗೇ ಮಾರಕವಾಗುತ್ತಾರೆ. ಸಮಾಜದಲ್ಲಿ ಮಹಿಳೆಯರಿಗೆ ಯಾವುದೇ ಸ್ಥಾನಮಾನ ಇಲ್ಲದಾಗುತ್ತದೆ. ನಾವು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದ್ದಾರೆ.

ಬಹುಶಃ ನಾನು ಸತ್ತ ಮೇಲೆ ನಿಮಗೆ ನೆಮ್ಮದಿ ಸಿಗುತ್ತದೆಯೇ ಹೇಗೆ ಎಂದು ಅಜಂ ಖಾನ್​ ಅವರನ್ನು ಪ್ರಶ್ನಿಸಿರುವ ಜಯಪ್ರದಾ, ಇಂತಹ ಹೇಳಿಕೆಗಳನ್ನು ನೀಡುವುದರಿಂದ, ಹೆದರಿಕೊಂಡು ಕಣದಿಂದ ಹಿಂದೆ ಸರಿಯುತ್ತೇನೆ ಎಂದು ಭಾವಿಸಿದ್ದರೆ, ಅದು ನಿಮ್ಮ ಭ್ರಮೆ. ನಾನು ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಅಜಂ ಖಾನ್​, ಬಿಜೆಪಿ ಅಭ್ಯರ್ಥಿ ಆಗಿರುವ ಹಿರಿಯ ನಟಿ ಜಯಪ್ರದಾ ಖಾಕಿ ಬಣ್ಣದ ಒಳ ಉಡುಪು ಧರಿಸುತ್ತಾರೆ ಎಂಬುದು 17 ದಿನಗಳ ಹಿಂದಷ್ಟೇ ನನಗೆ ಗೊತ್ತಾಯಿತು ಎಂದು ಹೇಳಿಕೆ ನೀಡಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ ಅಜಂ ಖಾನ್​ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.

person who doesnt repect woman shouldnt be allowed to contest jayaprada

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ