ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಬೆಂಬಲ ನೀಡಲು ನಿರ್ಧರಿಸಿದ ರೈತ ಸಂಘ

ಬೆಂಗಳೂರು, ಏ.15-ಅಭಿವೃದ್ಧಿಯ ದೃಷ್ಟಿಯಿಂದ ಮಂಡ್ಯ ಲೋಕ ಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಿಖಿಲ ಕುಮಾರ ಸ್ವಾಮಿ ಅವರಿಗೆ ಬೆಂಬಲ ನೀಡಲು ಕರ್ನಾಟಕ ರಾಜ್ಯ ರೈತ ಸಂಘ ನಿರ್ಧರಿಸಿದೆ .

ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಎಂ.ಟಿ.ಗಿರೀಶ್ ಗೌಡ ಮಾತನಾಡಿ, ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡಿದರೆ ಮಂಡ್ಯ ಕ್ಷೇತ್ರ ಅಭಿವೃದ್ಧಿ ಕಾಣಲು ಸಾಧ್ಯವಿಲ್ಲ. ಆದ್ದರಿಂದ ಮಂಡ್ಯದ ಜನತೆ ಅನುಕಂಪಕ್ಕೆ ಮೊರೆ ಹೋಗದೆ ಅಭಿವೃದ್ಧಿಯ ಕಡೆಗೆ ಮೊರೆ ಹೋಗಬೇಕು ಎಂದರು.

ನಮ್ಮ ಸಂಘ ಪ್ರಸ್ತುತ 17 ಜಿಲ್ಲೆಗಳಲ್ಲಿ ಜಿಲ್ಲಾಧ್ಯಕ್ಷರನ್ನ ಒಳಗೊಂಡಿದ್ದು ಸುಮಾರು 500ಕ್ಕೂ ಹೆಚ್ಚು ಕಾರ್ಯಕರ್ತರು ಮಂಡ್ಯದ ಜನತೆಯ ಮನೆ ಮನೆಗೆ ತೆರಳಿ ನಿಖಿಲ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ಮಾಡಲಿದ್ದೇವೆ ಎಂದು ತಿಳಿಸಿದರು .

ಸುದ್ದಿಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಹಣಮಂತ ಹಲಕಿ,ಎಸ್.ಕೆ.ಅಶೋಕ್, ಕೆ.ಎನ್.ಲಿಂಗೇಗೌಡ, ವಿ.ಮಂಜುನಾಥ, ಬಸಬನಾಯಕ್ ಸೇರಿದಂತೆ ಮತಿತ್ತರರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ