ಲಖನೌ: ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ವಿರುದ್ಧ ಮಹಿಳಾ ಆಯೋಗ ಎಫ್ ಐ ಆರ್ ದಾಖಲಿಸಿದೆ. ನಟಿ ಹಾಗೂ ಬಿಜೆಪಿ ಅಭ್ಯರ್ಥಿ ಜಯಪ್ರದಾ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ ಆಜಾಂ ಖಾನ್ ವಿರುದ್ಧ ಪ್ರಕರಣ ದಾಖಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಅಜಂಖಾನ್ ಅವರ ಭಾಷಣದ ವಿಡಿಯೋ ಆಧರಿಸಿ ರಾಂಪುರ ಪೊಲೀಸರು ಅಜಂಖಾನ್ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಅಲ್ಲದೇ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷ ರೇಖಾ ಶರ್ಮಾ ಅವರೂ ಕೂಡ ಅಜಂಖಾನ್ ಹೇಳಿಕೆ ವಿರುದ್ಧ ಕಿಡಿಕಾರಿ ಇದು ನಾಚಿಕೆಗೇಡಿನ ಹೇಳಿಕೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ ಈ ಸಂಬಂಧ ಪೊಲೀಸ್ ಇಲಾಖೆಯೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದ್ದರು. ಇದಾದ ಕೆಲವೇ ಗಂಟೆಗಳ ಅವಧಿಯಲ್ಲಿ ಅಜಂಖಾನ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದ ಸಮಾಜವನಾದಿ ಪಕ್ಷದ ಚುನಾವಣಾ ರ್ಯಾಲಿಯಲ್ಲಿ ಅಜಂಖಾನ್, ಜಯಪ್ರದಾ ಅವರನ್ನು ರಾಜಕೀಯಕ್ಕೆ ಕರೆತಂದಿದ್ದೇ ನಾನು. ಇದೇ ರಾಂಪುರದಿಂದ ಆಕೆಗೆ ಟಿಕೆಟ್ ಕೊಡಿಸಿದ್ದೆ. ಆಕೆಯ ಬಾಡಿಗಾರ್ಡ್ ನಂತೆ ಆಕೆಯನ್ನು ಯಾರೂ ಕೂಡ ಸ್ಪರ್ಶಿಸದಂತೆ ನೋಡಿಕೊಂಡೆ. ಆದರೆ ಆಕೆಯ ನಿಜವಾದ ಮುಖವನ್ನು ತಿಳಿಯಲು ನನಗೆ 17 ವರ್ಷಬೇಕಾಯಿತು. ಅಲ್ಲದೇ 17 ದಿನಗಳ ಹಿಂದಷ್ಟೇ ಆಕೆ ಖಾಕಿ ಅಂಡರ್ ವೇರ್ ಧರಿಸುತ್ತಾರೆ ಎಂದು ತಿಳಿಯಿತು ಎಂಬ ಹೇಳಿಕೆ ನೀಡಿದ್ದರು.
FIR has been registered against Samajwadi Party leader Azam Khan for his comment