ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಬಾಲಕಿಯರೇ ಮೇಲುಗೈ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿರುವ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದೆ. ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸದ್ದಾರೆ.

ಚುನಾವಣೆ ನೀತಿ ಸಂಹಿತೆ ಇರುವ ಕಾರಣ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಪಿಯುಸಿ ಬೋರ್ಡ್ ಪ್ರಭಾರ ನಿರ್ದೇಶಕಿ ಶಿಖಾ ಫಲಿತಾಂಶ ಪ್ರಕಟ ಮಾಡಿದರು.

ಫಲಿತಾಂಶದಲ್ಲಿ ಮತ್ತೊಮ್ಮೆ ಉಡುಪಿ ಪ್ರಥಮ ಸ್ಥಾನದಲ್ಲಿದ್ದರೆ ದಕ್ಷಿಣ ಕನ್ನಡ ದ್ವಿತೀಯ ಸ್ಥಾನದಲ್ಲಿದೆ. ಕೊಡಗು ಮೂರನೇ ಸ್ಥಾನದಲ್ಲಿದ್ದರೆ ಚಿತ್ರದುರ್ಗ ಕೊನೆಯ ಸ್ಥಾನಕ್ಕೆ ಕುಸಿದಿದೆ.

ಕಳೆದ ಮಾರ್ಚ್ ತಿಂಗಳಿನಲ್ಲಿದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಈ ಬಾರಿ ಸುಮಾರು 6.50 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು, ಸುದ್ದಿಗೋಷ್ಠಿ ಬಳಿಕ ಮಧ್ಯಾಹ್ನ 12 ಗಂಟೆ ನಂತರ ಪಿಯುಸಿ ವೆಬ್ ಸೈಟ್ ನಲ್ಲಿ ಅಧಿಕೃತವಾಗಿ ಫಲಿತಾಂಶ ಪ್ರಕಟಗೊಳ್ಳಲಿದೆ. ಮಂಗಳವಾರ ಕಾಲೇಜುಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ.

ಫಲಿತಾಂಶ ಲಭ್ಯವಾಗುವ ವೆಬ್ ಸೈಟ್ ವಿಳಾಸ :
http://pue.kar.nic.in
www.karresults.nic.in

II nd puc results are declared

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ