ಅಜಾಂ ಖಾನ್ ವಿರುದ್ಧ ಮಹಿಳಾ ಆಯೋಗ ಗರಂ

ನವದೆಹಲಿ: ನಟಿ, ಬಿಜೆಪಿ ಅಭ್ಯರ್ಥಿ ಜಯಪ್ರದಾ ಅವರ ವಿರುದ್ಧ ಸಮಾಜವಾದಿ ಪಕ್ಷದ ಮುಖಂಡ ಆಜಂಖಾನ್ ಮಾಡಿರುವ ಖಾಕಿ ಅಂಡರ್ ವೇರ್ ಹೇಳಿಕೆಗೆ ರಾಷ್ಟ್ರೀಯ ಮಹಿಳಾ ಆಯೋಗ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರು, ಅಜಂ ಖಾನ್ ಅವರ ಹೇಳಿಕೆ ಅತ್ಯಂತ ನಾಚಿಕೆಗೇಡಿನದ್ದಾಗಿದೆ. ಈ ಸಂಬಂಧ ವಿವರಣೆ ನೀಡುವಂತೆ ಈ ಕೂಡಲೇ ಅವರಿಗೆ ಷೋಕಾಸ್ ನೋಟಿಸ್ ನೀಡುತ್ತೇವೆ. ಅಂತೆಯೇ ಅಜಂಖಾನ್ ಅವರ ಸ್ಪರ್ಧೆಯನ್ನು ತಡೆ ಹಿಡಿಯುವಂತೆ ಚುನಾವಣಾ ಆಯೋಗಕ್ಕೂ ಮನವಿ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದ ಸಮಾಜವನಾದಿ ಪಕ್ಷದ ಚುನಾವಣಾ ರ್ಯಾಲಿಯಲ್ಲಿ ಅಜಂಖಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ವಿಡಿಯೋವನ್ನು ಟ್ವಿಟರ್ ಬಳಕೆದಾರರೊಬ್ಬರು ರೇಖಾ ಶರ್ಮಾ ಅವರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದರು. ಇದಕ್ಕೆ ರೇಖಾ ಶರ್ಮಾ ಅವರು ಅಜಂಖಾನ್ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

National Commission for Women (NCW) sends a notice to SP leader Azam Khan over his remark

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ