ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಪ್ರಕರಣದಲ್ಲಿ ಬಿಜೆಪಿಯ ಮೀನಾಕ್ಷಿ ಲೇಖಿ ದಾಖಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಿದೆ.
ರಫೇಲ್ ಯುದ್ಧ ವಿಮಾನ ಖರೀದಿ ಕುರಿತು ಪ್ರಕರಣದಲ್ಲಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸುವಾಗ ರಾಹುಲ್ ಗಾಂಧಿ ಬಳಸಿರುವ ಭಾಷೆ ಮತ್ತು ಪದಗಳು ಬೇರೊಂದು ಅರ್ಥ ನೀಡುವಂತಿವೆ. ತಮ್ಮ ವೈಯಕ್ತಿಕ ಅಭಿಪ್ರಾಯವನ್ನೇ ಸುಪ್ರೀಂಕೋರ್ಟ್ನ ಆದೇಶ ಎಂಬಂತೆ ಬಿಂಬಿಸುತ್ತಿದ್ದಾರೆ. ಇದು ನ್ಯಾಯಾಂಗ ನಿಂದನೆಯಾಗುತ್ತದೆ ಎಂದು ಮೀನಾಕ್ಷಿ ಲೇಖಿ ಅರ್ಜಿಯಲ್ಲಿ ಆರೋಪಿಸಿದ್ದಾರೆ.
ಅರ್ಜಿಯ ವಿಚಾರಣೆಯನ್ನು ಏ.22ಕ್ಕೆ ನಿಗದಿಪಡಿಸಲಾಗಿದೆ. ಅಷ್ಟರಲ್ಲೇ ಈ ಕುರಿತು ವಿವರಣೆ ನೀಡುವಂತೆ ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ಸೂಚಿಸಿದೆ.
SC seeks explanation from Rahul Gandhi for his alleged contemptuous remarks on Rafale verdict