ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಸುಪ್ರೀಂ ನೋಟೀಸ್

ನವದೆಹಲಿ: ರಫೇಲ್​ ಯುದ್ಧ ವಿಮಾನ ಖರೀದಿ ಪ್ರಕರಣದಲ್ಲಿ ಬಿಜೆಪಿಯ ಮೀನಾಕ್ಷಿ ಲೇಖಿ ದಾಖಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿಗೆ ನೋಟಿಸ್​ ಜಾರಿ ಮಾಡಿದೆ.

ರಫೇಲ್​ ಯುದ್ಧ ವಿಮಾನ ಖರೀದಿ ಕುರಿತು ಪ್ರಕರಣದಲ್ಲಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸುವಾಗ ರಾಹುಲ್​ ಗಾಂಧಿ ಬಳಸಿರುವ ಭಾಷೆ ಮತ್ತು ಪದಗಳು ಬೇರೊಂದು ಅರ್ಥ ನೀಡುವಂತಿವೆ. ತಮ್ಮ ವೈಯಕ್ತಿಕ ಅಭಿಪ್ರಾಯವನ್ನೇ ಸುಪ್ರೀಂಕೋರ್ಟ್​ನ ಆದೇಶ ಎಂಬಂತೆ ಬಿಂಬಿಸುತ್ತಿದ್ದಾರೆ. ಇದು ನ್ಯಾಯಾಂಗ ನಿಂದನೆಯಾಗುತ್ತದೆ ಎಂದು ಮೀನಾಕ್ಷಿ ಲೇಖಿ ಅರ್ಜಿಯಲ್ಲಿ ಆರೋಪಿಸಿದ್ದಾರೆ.

ಅರ್ಜಿಯ ವಿಚಾರಣೆಯನ್ನು ಏ.22ಕ್ಕೆ ನಿಗದಿಪಡಿಸಲಾಗಿದೆ. ಅಷ್ಟರಲ್ಲೇ ಈ ಕುರಿತು ವಿವರಣೆ ನೀಡುವಂತೆ ರಾಹುಲ್​ ಗಾಂಧಿಗೆ ಸುಪ್ರೀಂಕೋರ್ಟ್​ ಸೂಚಿಸಿದೆ.

SC seeks explanation from Rahul Gandhi for his alleged contemptuous remarks on Rafale verdict

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ