ನಾಳೆ ಸಿ.ಎಂ.ಕುಮಾರಸ್ವಾಮಿ ಶಿವಮೊಗ್ಗ ಕ್ಷೇತ್ರದಲ್ಲಿ ಪ್ರಚಾರ

ಬೆಂಗಳೂರು, ಏ.16-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆಯಿಂದ ಎರಡನೇ ಹಂತದಲ್ಲಿ ಮತದಾನ ನಡೆಯುವ ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.

ಮೊದಲ ಹಂತದಲ್ಲಿ ಚುನಾವಣೆ ನಡೆಯುವ ಲೋಕಸಭಾ ಕ್ಷೇತ್ರಗಳಲ್ಲಿ ಇಂದಿನವರೆಗೂ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಕುಮಾರಸ್ವಾಮಿ ನಾಳೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡು ಮತ ಯಾಚನೆ ಮಾಡಲಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಧುಬಂಗಾರಪ್ಪ ಪರವಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸೊರಬ, ಭದ್ರಾವತಿ, ಶಿಕಾರಿಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.

ನಾಳೆಯ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕುಮಾರಸ್ವಾಮಿಯವರಿಗೆ ಕಾಂಗ್ರೆಸ್-ಜೆಡಿಎಸ್‍ನ ಸ್ಥಳೀಯ ನಾಯಕರು, ಮುಖಂಡರು ಸಾಥ್ ನೀಡಲಿದ್ದಾರೆ.

ಗುರುವಾರ ರಾಮನಗರ ತಾಲೂಕಿನ ಕೇತಗಾನಹಳ್ಳಿ ಮುಖ್ಯಮಂತ್ರಿ ಮತದಾನ ಮಾಡಿದ ನಂತರ ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆನಂದ್ ಅಸ್ನೋಟಿಕರ್ ಪರವಾಗಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಅಂದು ಕ್ಷೇತ್ರದ ಕುಮುಟಾ, ಮುಂಡಗೋಡ,ಹಳಿಯಾಳ, ದಾಂಡೇಲಿ ಮೊದಲಾದ ಕಡೆ ಚುನಾವಣಾ ಪ್ರಚಾರ ಕೈಗೊಂಡು ಮೈತ್ರಿ ಅಭ್ಯರ್ಥಿ ಪರವಾಗಿ ಮತಯಾಚಿಸಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ