ಪ್ರತಿಯೊಬ್ಬರು ತಪ್ಪದೆ ಮತದಾನ ಮಾಡಬೇಕು-ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ

ಬೆಂಗಳೂರು, ಏ.16- ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ತಪ್ಪದೆ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮನವಿ ಮಾಡಿದೆ.

ಸಮಾಜ ಬಾಂಧವರಲ್ಲಿ ಸಂಘಗಳು ಜಾಗೃತಿ ಉಂಟು ಮಾಡುವ ಮೂಲಕ ಹೆಚ್ಚು ಮತದಾನ ಮಾಡುವಂತೆ ಪ್ರೇರೇಪಿಸಬೇಕು.ಪ್ರತಿಯೊಬ್ಬರೂ ಮತದಾನ ದಿನದಂದು ತಪ್ಪದೆ ಮತದಾನ ಮಾಡಬೇಕು ಎಂದು ಮಹಾಸಭಾದ ಅಧ್ಯಕ್ಷ ಕೆ.ಎನ್.ವೆಂಕಟನಾರಾಯಣ್ ಮನವಿ ಮಾಡಿದ್ದಾರೆ.

ಮತದಾನದ ಬಗ್ಗೆ ವ್ಯಾಪಕವಾಗಿ ರಾಜ್ಯಾದ್ಯಂತ ಜಾಗೃತಿ ಮೂಡಿಸಲು ಎಲ್ಲಾ ಸಂಘಗಳು ತಮ್ಮ ವ್ಯಾಪ್ತಿಯಲ್ಲಿ ಕಾರ್ಯಕ್ರಮವನ್ನು ರೂಪಿಸಿಕೊಳ್ಳಬೇಕೆಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ