ಚುನಾವಣಾ ಕಾರ್ಯಕ್ಕೆ ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿ ಬಸ್‍ಗಳು

ಬೆಂಗಳೂರು, ಏ.16- ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 18ರಂದು ಮೊದಲ ಹಂತದ ಮತದಾನ ನಡೆಯುವ ಹಿನ್ನೆಲೆಯಲ್ಲಿ ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿಯ 5014 ಬಸ್‍ಗಳನ್ನು ಚುನಾವಣಾ ಕಾರ್ಯಕ್ಕಾಗಿ ನೀಡಲಾಗಿದೆ.ಇದರಿಂದ ನಾಳೆ ಮತ್ತು ಗುರುವಾರ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ.

ಚುನಾವಣಾ ಕಾರ್ಯ ಹಾಗೂ ಪೊಲೀಸ್ ಇಲಾಖೆಗೆ ಹೆಚ್ಚಿನ ಬಸ್‍ಗಳನ್ನು ನೀಡಿರುವುದರಿಂದ ದೈನಂದಿನ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೆಎಸ್‍ಆರ್‍ಟಿಸಿ ಮನವಿ ಮಾಡಿದೆ.

ಕೆಎಸ್‍ಆರ್‍ಟಿಸಿಯ ಸುಮಾರು 8705 ಬಸ್‍ಗಳ ಪೈಕಿ 3314 ಬಸ್‍ಗಳನ್ನು ಲೋಕಸಭೆ ಚುನಾವಣಾ ಕಾರ್ಯ ಹಾಗೂ ಪೊಲೀಸ್ ಇಲಾಖೆಗಾಗಿ ನೀಡಲಾಗಿದೆ.

ಅದೇ ರೀತಿ ಬಿಎಂಟಿಸಿಯ 1700 ಬಸ್‍ಗಳನ್ನು ಚುನಾವಣಾ ಕಾರ್ಯಕ್ಕೆ ನೀಡಲಾಗಿದೆ.ಪ್ರಯಾಣಿಕರಿಗೆ ಆಗುವ ತೊಂದರೆಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಗರಿಷ್ಠ ಮಟ್ಟದ ಪ್ರಯತ್ನ ಮಾಡಲಾಗುವುದು ಎಂದು ಕೆಎಸ್‍ಆರ್‍ಟಿಸಿ ಮೂಲಗಳು ತಿಳಿಸಿವೆ.

ಬಿಎಂಟಿಸಿಯ ಸುಮಾರು 6200 ಬಸ್‍ಗಳ ಪೈಕಿ 1700 ಬಸ್‍ಗಳನ್ನು ಚುನಾವಣಾ ಕಾರ್ಯಕ್ಕೆ ನೀಡಲಾಗಿದೆ.ಆದರೂ ದೈನಂದಿನ ರೂಟ್‍ಗಳಲ್ಲಿ ಹೆಚ್ಚಿನ ಪ್ರಮಾಣದ ವ್ಯತ್ಯಯವಾಗುವುದಿಲ್ಲ. ಅಲ್ಲದೆ, ಮತದಾನ ದಿನದಂದು ಪ್ರಯಾಣಿಕರ ಸಂಖ್ಯೆಯೂ ಕಡಿಮೆ ಇರುವುದರಿಂದ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆ ಆಗುವುದಿಲ್ಲ ಎಂದು ಬಿಎಂಟಿಸಿ ಮೂಲಗಳು ಸ್ಪಷ್ಟಪಡಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ