ರಾಜಕೀಯ ಲಾಭಕ್ಕಾಗಿ ಲಿಂಗಾಯಿತ-ವೀರಶೈವ ಧರ್ಮ ವಿಭಜನೆ-ಸಂಸದ ಪ್ರಹ್ಲಾದ ಜೋಶಿ

ಹುಬ್ಬಳ್ಳಿ, ಏ.16- ಲಿಂಗಾಯತ ವೀರಶೈವ ಧರ್ಮ ವಿಭಜನೆ ರಾಜಕೀಯ ಲಾಭಕ್ಕಾಗಿ ಎನ್ನುವುದು ಬಹಿರಂಗವಾಗಿದೆ ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ಒಳಿತು ಮಾಡುವ ಉದ್ದೇಶದಿಂದ ಧರ್ಮ ಹೋರಾಟ ರೂಪಿಸಿದ್ದಲ್ಲ. ರಾಜಕೀಯ ಲಾಭ ಪಡೆಯಲು ರೂಪಿಸಿರುವುದು ಎಂದು ಹೇಳಿದರು.

ವೋಟ್ ಬ್ಯಾಂಕ್‍ಗಾಗಿ ಕಾಂಗ್ರೆಸ್ ಇಂತಹ ಕೀಳು ಮಟ್ಟದ ರಾಜಕೀಯ ಮಾಡಲು ಹಿಂಜರಿಯುವುದಿಲ್ಲ. ಕಾಂಗ್ರೆಸ್ ಪಕ್ಷ ಹಿಂದೂ ವಿರೋಧಿ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದರು.

ಹಿಂದೂ ಭಯೋತ್ಪಾದಕ ಎಂಬ ಶಬ್ಧವನ್ನು ಹುಟ್ಟು ಹಾಕಿದ್ದೇ ಕಾಂಗ್ರೆಸ್ ಪಕ್ಷ ಎಂದರು. ಯುಪಿಎ ಎರಡನೇ ಅವಧಿಯಲ್ಲಿ ಭಯೋತ್ಪಾದನೆ ಮಿತಿಮೀರಿತ್ತು.

ಇದನ್ನು ನಿಯಂತ್ರಿಸುವ ಕೆಲಸವನ್ನು ಕಾಂಗ್ರೆಸ್ ಮಾಡಲಿಲ್ಲ. ಹಿಂದೂ ಹಾಗೂ ಆರ್‍ಎಸ್‍ಎಸ್ ಸಂಘಟನೆಗಳನ್ನು ಸಿಲುಕಿಸುವ ಪ್ರಯತ್ನ ಮಾಡಿದರು ಎಂದರು.

ಕಾಂಗ್ರೆಸ್, ಜೆಡಿಎಸ್‍ಗೆ ಯಾವುದೇ ಸೈದ್ಧಾಂತಿಕ ನಿಲುಗಳಿಲ್ಲ. ಮಹದಾಯಿ ವಿಚಾರದಲ್ಲಿ ರೈತರನ್ನು ಎತ್ತಿಕಟ್ಟುವ ಕೆಲಸ ನಡೆಯುತ್ತಿದೆ. ನನ್ನ ಹಾಗೂ ಪಕ್ಷದ ವಿರುದ್ಧ ರೈತರನ್ನು ಎತ್ತಿ ಕಟ್ಟಲಾಯಿತು. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನ ಇವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲೂ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ