ನವದೆಹಲಿ: ಮಸೀದಿಗೆ ಮಹಿಳೆಯರ ಪ್ರವೇಶ ನಿರ್ಬಂಧ ತೆರವುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆಯನ್ನು ನಡೆಸಿದ ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರ, ರಾಷ್ಟ್ರೀಯ ಮಹಿಳಾ ಆಯೋಗ, ಕೇಂದ್ರ ವಕ್ಫ್ ಮಂಡಳಿ ಮತ್ತು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗಳಿಗೆ ನೋಟಿಸ್ ಜಾರಿ ಮಾಡಿದೆ.
ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಲು ಮುಸ್ಲಿಂ ಮಹಿಳೆಯರನ್ನು ನಿರ್ಬಂಧಿಸುವ ಕ್ರಮ ಮಹಿಳೆಯ ಮೂಲಭೂತ ಹಕ್ಕಿನ ಉಲ್ಲಂಘನೆಯಾಗುತ್ತದೆ. ಆದ್ದರಿಂದ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಲು ಅವರಿಗೂ ಅವಕಾಶ ಮಾಡಿಕೊಡಬೇಕು. ಮಸೀದಿಗೆ ಮಹಿಳೆಯರ ಪ್ರವೇಶ ನಿರ್ಬಂಧಿಸುವುದನ್ನು ಅಕ್ರಮ ಮತ್ತು ಅಸಂವಿಧಾನಿಕ ಎಂದು ಘೋಷಿಸಬೇಕು ಎಂದು ಕೋರಿ ಪುಣೆ ಮೂಲದ ದಂಪತಿ ಸುಪ್ರೀಂಕೋರ್ಟ್ಗೆ ಮನವಿ ಮಾಡಿಕೊಂಡಿದ್ದರು.
ಜತೆಗೆ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಲು ಮಹಿಳೆಯರಿಗೂ ಅವಕಾಶ ಮಾಡಿಕೊಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದರು. ಸುಪ್ರೀಂಕೋರ್ಟ್ ಮಂಗಳವಾರ ಈ ಅರ್ಜಿಯ ವಿಚಾರಣೆ ನಡೆಸಿ, ನೋಟಿಸ್ಗಳನ್ನು ಜಾರಿ ಮಾಡಿದೆ.
SC issues notice to Centre on plea seeking entry of Muslim women