ಹೊನ್ನಾಳಿ, ಏ.16- ಮಹಾಘಟಬಂಧನದಲ್ಲಿ ಯಾರು ಪ್ರಧಾನಿಯಾಗಬೇಕು ಎಂಬುದು ಗೊಂದಲವಾಗಿದೆ. ದಿನಗೊಬ್ಬರು ಪ್ರಧಾನಿಯಾಗುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಲೇವಡಿ ಮಾಡಿದರು.
ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಅಭ್ಯರ್ಥಿ ಜಿ.ಎಂ.ಸಿದ್ದೇಶ್ವರ ಪರ ಮತ ಯಾಚಿಸಿ ಮಾತನಾಡಿದ ಅವರು, ಒಂದು ವೇಳೆ ಘಟಬಂಧನದ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಸೋಮವಾರ ಮಾಯಾವತಿ, ಮಂಗಳವಾರ ಅಖಿಲೇಶ್ ಯಾದವ್, ಬುಧವಾರ ಚಂದ್ರಬಾಬು ನಾಯ್ಡು, ಶನಿವಾರ ಮಮತಾ ಬ್ಯಾನರ್ಜಿ ಪ್ರಧಾನಿಯಾಗಿರುತ್ತಾರೆ. ಭಾನುವಾರ ಎಲ್ಲರಿಗೂ ರಜೆ ಎಂದು ವ್ಯಂಗ್ಯವಾಡಿದರು.
ದೇಶಾದ್ಯಂತ ಬಿಜೆಪಿ ಅಲೆ ಇದೆ. ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ಜಯ ಗಳಿಸಲಿದ್ದಾರೆ ಎಂದರು.