ಮೈತ್ರಿ ಸರ್ಕಾರ ಬೆಂಬಲಿಸಲು ನಿರ್ಧರಿಸಿದ ಕ್ರಿಶ್ಚಿಯನ್ ಪೊಲಿಟಿಕಲ್ ಪ್ರಂಟ್

ಬೆಂಗಳೂರು, ಏ.17- ಪ್ರಸ್ತಕ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರವನ್ನು ಕರ್ನಾಟಕ ಸ್ಟೇಟ್ ಕ್ರಿಶ್ಚಿಯನ್ ಯುನೈಟೆಡ್ ಪೊಲಿಟಿಕಲ್ ಫ್ರಂಟ್ ಬೆಂಬಲಿಸಲು ನಿರ್ಧರಿಸಿದೆ.

ಸುದ್ದಿಗೋಷ್ಠಿಯಲ್ಲಿ ಫ್ರಂಟ್‍ನ ಪ್ರಧಾನ ಕಾರ್ಯದರ್ಶಿ ಡಿ.ಯಸ್. ನಾಥನ್ ಡೇನಿಯಲ್ ಮಾತನಾಡಿ, ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎಲ್ಲಾ ರಂಗಗಳಲ್ಲಿ ವಿಫಲವಾಗಿದ್ದು, ಅಲ್ಪಸಂಖ್ಯಾತರ ಮೇಲೆ ದ್ವೇಷ ಕಾರುತ್ತಿದೆ ಎಂದು ದೂರಿದರು.

ಬಿಜೆಪಿ ಸರ್ಕಾರ ಲೋಕಪಾಲ ಬಿಲ್ ಮಾಡುತ್ತೇನೆ ಎಂದು ಹೇಳಿ ಇದುವರೆಗೂ ಜಾರಿ ಮಾಡಿಲ್ಲ. ವಿದೇಶದಿಂದ ಕಪ್ಪು ಹಣ ತರುತ್ತೇವೆ ಎಂದು ಆಶ್ವಾಸನೆ ನೀಡಿ ಇದುವರೆಗೂ ವಾಪಾಸ್ಸು ತಂದಿಲ್ಲ, ಮಹಿಳಾ ಮೀಸಲಾತಿ ಬಿಲ್ ಬಗ್ಗೆ ಯೋಚನೆ ನಡೆಸಿಲ್ಲ, ಧರ್ಮದ ಹೆಸರಿನಲ್ಲಿ ಕೋಮು ಗಲಭೆಗಳು ನಡೆಯುತ್ತಿದ್ದರೂ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು.

ದೇಶದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆಯೂ ಏರಿಕೆ ಮಾಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿ ಸರ್ಕಾರವು ಈ ಬಾರಿಯ ಬಜೆಟ್‍ನಲ್ಲಿ ಕ್ರೈಸ್ತರ ಅಭಿವೃದ್ಧಿ ನಿಗಮ ಘೋಷಿಸಿ 200 ಕೋಟಿ ಅನುದಾನ ನೀಡಿರುವುದನ್ನು ಸಮುದಾಯ ಸ್ವಾಗತಿಸಿದೆ. ಸಂಸತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇರುವುದರಿಂದ ಸಂವಿಧಾನ ವಿರೋಧಿ ಬಿಜೆಪಿ ಸೋಲಿಸಲು ಕ್ರೈಸ್ತರು ಸಮುದಾಯ ನಿರ್ಧರಿಸಿದೆ ಎಂದು ಡಿ.ಯಸ್. ನಾಥನ್ ಡೇನಿಯಲ್ ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ