
ಬೆಳಗಾವಿ, ಏ.17- ಸಾಕಷ್ಟು ದಿನಗಳಿಂದ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೊನೆಗೂ ಮೌನ ಮುರಿದು ಇಂದು ದಿಢೀರನೆ ರಮೇಶ್ ಜಾರಕಿಹೊಳಿ ಕಾರ್ಯಕರ್ತರ ಸಭೆ ಕರೆದಿದ್ದಾರೆ.
ಗೋಕಾಕ ನಗರದ ತಮ್ಮ ನಿವಾಸದಲ್ಲಿ ರಮೇಶ್ ಜಾರಕಿಹೊಳಿ ಕಾರ್ಯಕರ್ತರ ಜೊತೆ ಸಭೆ ನಡೆಸಲಿದ್ದಾರೆ. ಯಾವ ವಿಚಾರವಾಗಿ ಕಾರ್ಯಕರ್ತರ ಜೊತೆ ಚರ್ಚೆ ನಡೆಸಿಲಿದ್ದಾರೆ ಎಂಬ ಬಗ್ಗೆ ಕುತೂಹಲ ಮೂಡಿದೆ.
ರಮೇಶ್ ಜಾರಕಿಹೊಳಿ ಕಾಂಗ್ರೆಸ್ನಲ್ಲೇ ಮುಂದುವರೆಯುತ್ತಾರಾ? ಬಿಜೆಪಿಗೆ ಸೇರ್ತಾರಾ?ಎಂಬ ಪ್ರಶ್ನೆ ಎದ್ದಿದೆ. ಈ ಹಿನ್ನೆಲೆ ಅವರ ನಡೆ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.