ಮದುವೆ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ ನವದಂಪತಿ

ಶ್ರೀನಗರ: ದೇಶದ 95 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ನೂತನ ವಧು-ವರರು ಮದುವೆ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಬಂದು ಮತದಾನ ಮಾಡಿರುವ ಘಟನೆ ಉದಂಪುರದಲ್ಲಿ ನಡೆದಿದೆ.

ಇಂದು 11 ರಾಜ್ಯಗಳಲ್ಲಿ ಎರಡನೇ ಹಂತದ ಮತದಾನ ಪ್ರಾರಂಭವಾಗಿದೆ. ಜಮ್ಮು ಮತ್ತು ಕಾಶ್ಮೀರದ ಉದಂಪುರದಲ್ಲಿ ಮದುವೆಯಾದ ದಂಪತಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಲು ಮದುವೆ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ.

ದಂಪತಿ ಮದುವೆ ಉಡುಪಿನಲ್ಲೇ ಮತಗಟ್ಟೆಗೆ ಬಂದಿದ್ದು, ಎಲ್ಲರ ಗಮನವನ್ನು ಸೆಳೆದಿದ್ದಾರೆ. ಇದೀಗ ಈ ಜೋಡಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ನವದಂಪತಿಗೆ ನೆಟ್ಟಿಗರು ಶುಭಕೋರಿದ್ದಾರೆ.

Jammu & Kashmir, A newly married couple arrive at a polling station in Udhampur to cast their votes for LokSabha Elections-2019

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ