ಲೋಕ ಸಮರ: ರಾಜ್ಯದಲ್ಲಿ ಗಣ್ಯಾತಿಗಣ್ಯರ ಮತದಾನ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕರ್ನಾಟಕದ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಿಂದ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದ ಗೌಡ ಅವರು ಮತವನ್ನು ಚಲಾಯಿಸರು. ಜೊತೆಗೆ ತಮ್ಮ ಧರ್ಮಪತ್ನಿ ಹಾಗೂ ಕುಟುಂಬದ ಸದಸ್ಯರ ಜತೆ ಮತಗಟ್ಟೆಗೆ ಆಗಮಿಸಿ, ಮತ ಚಲಾಯಿಸಿದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಮತಗಟ್ಟೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾಸೀತಾರಮನ್, ಮತಗಟ್ಟೆಯಲ್ಲಿ ಸಾರ್ವಜನಿಕರ ಜತೆ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

ಮಾಜಿ ಸಚಿವ ಸುರೇಶ್ ಕುಮಾರ್ ತಮ್ಮಕುಟುಂಬದೊಂದಿಗೆ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದರು. ಇದೇ ವೇಳೆ ರಾಷ್ಟ್ರೀಯ ಬಿಜೆಪಿ ಸಹ ಸಂಘಟನಾ ಕಾರ್ಯದರ್ಶಿ ಸಂತೋಷ ಕೂಡ ಮತ ಚಲಾಯಿಸಿದ್ದಾರೆ.

ಆರ್.ಎಸ್.ಎಸ್. ನ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಸರ್ಕಾರಿ ಪ್ರಾಥಮಿಕ ಶಾಲೆ, 2ನೇ ಮುಖ್ಯರಸ್ತೆ, ಶೇಷಾದ್ರಿಪುರಂನಲ್ಲಿ ಬೆಳಿಗ್ಗೆ 8:45 ಕ್ಕೆ ಮತವನ್ನು ಚಲಾಯಿಸಿದರು.
lok sabha election,karnataka,fist phase voting

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ