ಲಂಡನ್, ಏ.19- ಉತ್ತರ ಐರ್ಲೆಂಡ್‍ನ ಲಂಡನ್‍ಡೆರ್ರಿ ಪ್ರದೇಶದಲ್ಲಿ ಉಗ್ರಗಾಮಿಗಳ ಗುಂಡಿನ ದಾಳಿಗೆ 29 ವರ್ಷದ ಮಹಿಳೆಯೊಬ್ಬರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯನ್ನು ಭಯೋತ್ಪಾದಕರ ಕೃತ್ಯ ಎಂದು ಪರಿಗಣಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ಕ್ರೆಗ್ಗನ್ ಪಟ್ಟಣದಲ್ಲಿ ನಿನ್ನೆ ರಾತ್ರಿ ಗುಂಡಿನ ದಾಳಿ ನಡೆದಿದೆ. ಈ ಕೃತ್ಯದಲ್ಲಿ 29 ವರ್ಷದ ಮಹಿಳೆಯೊಬ್ಬರು ಹತರಾಗಿದ್ದಾರೆ. ಇದನ್ನು ನಾವು ಭಯೋತ್ಪಾದಕರ ಕೃತ್ಯ ಎಂದು ಪರಿಗಣಿಸಿದ್ದೇವೆ. ಹಂತಕರಿಗಾಗಿ ವ್ಯಾಪಕ ಶೋಧ ಮುಂದುವರಿದಿದೆ ಎಂದು ಸಹಾಯಕ ಮುಖ್ಯ ಕಾನ್‍ಸ್ಟೆಬಲ್ ಮಾರ್ಕ್ ಹ್ಯಾಮಿಲ್ಟನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಘಟನೆಯಿಂದ ಉತ್ತರ ಐರ್ಲೆಂಡ್‍ನಲ್ಲಿ ಆತಂಕದ ವಾತಾವರಣ ನೆಲೆಸಿದ್ದು, ಉಗ್ರರ ದಾಳಿ ಮರುಕಳಿಸುವ ಸಾಧ್ಯತೆ ಬಗ್ಗೆ ಭೀತಿ ಆವರಿಸಿದೆ.