ಹಾವೇರಿ,ಏ.20- ಮೋದಿ ಮುಖ ನೋಡಿ ಮತ ಹಾಕಿ ಎನ್ನಬೇಡಿ. ನಿಮ್ಮ ಸಾಧನೆ ಹೇಳಿಕೊಂಡು ಮತ ಕೇಳಿ ಎಂದು ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಉದಾಸಿಗೆ ಸಚಿವ ಜಮೀರ್ ಅಹಮದ್ ಖಾನ್ ಟಾಂಗ್ ನೀಡಿದರು.
ಮುಖ ಸರಿಯಿಲ್ಲ ಎಂದು ಹೆಂಡತಿಯನ್ನು ಬಿಟ್ಟಿದ್ದಾರೆ. ಮೋದಿ ಅವರ ಮುಖ ನೋಡಿ ಮತ ಹಾಕಿ ಎನ್ನಬೇಡಿ.ನಿಮ್ಮ ಸಾಧನೆ ಹೇಳಿಕೊಳ್ಳಿ ಎಂದು ಲೇವಡಿ ಮಾಡಿದರು.
ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ. ಕುಮಾರಸ್ವಾಮಿಯವರು 5 ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ ಎಂದರು.
ಡಿಕೆಶಿ ನಾಯಕರಾಗಿದ್ದಾರೆ ಪಕ್ಷದ ಕೆಲಸ ಮಾಡುತ್ತಾರೆ ಎಂದ ಅವರು ,ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.