ಕ್ಷೇತ್ರದಾದ್ಯಂತ ಸೋಲು ಗೆಲುವಿನ ಲೆಕ್ಕಾಚಾರ-ಜೋರಾದ ಬೆಟ್ಟಿಂಗ್

ಮಂಡ್ಯ, ಏ.21- ಲೋಕಸಭೆ ಮತದಾನದ ನಂತರ ಕ್ಷೇತ್ರದಾದ್ಯಂತ ಸೋಲು-ಗೆಲುವಿನ ಲೆಕ್ಕಾಚಾರ ನಡೆಯುತ್ತಿದ್ದು , ಈ ಹಿನ್ನೆಲೆಯಲ್ಲಿ ಬೆಟ್ಟಿಂಗ್ ಕೂಡ ಜೋರಾಗಿದ್ದು , ಜಿಲ್ಲಾ ಅಪರಾಧ ವಿಭಾಗದ (ಡಿಸಿಬಿ) ಇನ್ಸ್‍ಪೆಕ್ಟರ್ ನೇತೃತ್ವದಲ್ಲಿ ಐವರು ಪೆÇಲೀಸರ ತಂಡ ರಚಿಸಲಾಗಿದೆ.
ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಕ್ಷೇತ್ರದ ಹಳ್ಳಿ ಹಳ್ಳಿಗಳಲ್ಲಿ ಜನರು ಸೋಲು- ಗೆಲುವಿನ ಲೆಕ್ಕಾಚಾರದಲ್ಲಿ ಮುಳುಗಿದ್ದಾರೆ.ಕೆಲವರು ಹಣ, ಹಸು, ಎಮ್ಮೆ, ಆಡು, ಕುರಿ, ಕೋಳಿಯನ್ನು ಪಣಕ್ಕಿಟ್ಟಿದ್ದಾರೆ.

ಮತದಾನ ಮುಗಿಯುತ್ತಿದ್ದಂತೆ ಹಲವು ಆಂತರಿಕ ಸಮೀಕ್ಷೆಗಳು ಜನರ ಕುತೂಹಲ ಕೆರಳಿಸಿವೆ. ಜೆಡಿಎಸ್ ಪಕ್ಷ ತನ್ನದೇ ಸಮೀಕ್ಷೆ ಬಿಡುಗಡೆ ಮಾಡಿದ್ದು ನಿಖಿಲ್ ಗೆಲುವಿಗೆ ಕಾರಣವಾದ ಅಂಶಗಳ ಮೇಲೆ ಬೆಳಕು ಚೆಲ್ಲಿದೆ.ಅದರಂತೆ ಪಕ್ಷೇತರ ಅಭ್ಯರ್ಥಿ ಸುಮಲತಾ ಬೆಂಬಲಿಗರೂ ತಮ್ಮದೇ ಸಮೀಕ್ಷೆ ಬಿಡುಗಡೆ ಮಾಡಿದ್ದಾರೆ.
ಅವು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದ್ದು ಬೆಟ್ಟಿಂಗ್ ಹಾವಳಿಗೆ ಕಾರಣವಾಗಿವೆ.

ಮೇ 23ರವರೆಗೂ ಕ್ಷೇತ್ರದಲ್ಲಿ ಬೆಟ್ಟಿಂಗ್‍ನಿಂದ ಉಂಟಾಗಬಹುದಾದ ಅಪಾಯ ತಪ್ಪಿಸಲು ಪೆÇಲೀಸ್ ಇಲಾಖೆ ಮುಂದಾಗಿದೆ.ಬೆಟ್ಟಿಂಗ್ ಮೇಲೆ ವಿಶೇಷ ನಿಗಾ ವಹಿಸುವಂತೆ ಡಿಸಿಬಿ ತಂಡ ಕ್ಷೇತ್ರದ ಎಲ್ಲಾ ಪೆÇಲೀಸ್ ಠಾಣೆಗಳ ಸಬ್ ಇನ್ಸ್‍ಪೆಕ್ಟರ್‍ಗಳಿಗೆ ಸೂಚನೆ ನೀಡಿದೆ.

ಜನರು ವೈಯಕ್ತಿಕವಾಗಿ ಬೆಟ್ಟಿಂಗ್ ಕಟ್ಟಿದರೆ ಅದನ್ನು ತಡೆಯುವುದು ಕಷ್ಟ. ಆದರೆ ಒಬ್ಬರ ನೇತೃತ್ವದಲ್ಲಿ ಸಂಘಟನಾತ್ಮಕವಾಗಿ ದಂಧೆ ನಡೆಸಿದರೆ ಅದನ್ನು ತಡೆಯುತ್ತೇವೆ. ಆರೋಪಿಗಳನ್ನು ತಕ್ಷಣ ಬಂಧಿಸುತ್ತೇವೆ. ಜಿಲ್ಲೆಯ ಎಲ್ಲಾ ಠಾಣೆಗಳ ಸಿಬ್ಬಂದಿ ಅದಕ್ಕಾಗಿ ಸಜ್ಜಾಗಿದ್ದಾರೆ ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ