ಶಿವಮೊಗ್ಗ ಏ.21-ಜಿಲ್ಲೆಯ ಸಾಗರ ತಾಲ್ಲೂಕಿನ ನೆಲ್ಲಿಬೀಡು ಗ್ರಾಮಗಳಲ್ಲಿ ಇಂದು ಬಿಜೆಪಿ ಶಾಸಕರಾದ ಹರತಾಳು ಹಾಲಪ್ಪ ಅವರ ಸಮ್ಮುಖದಲ್ಲೇ ಕೈ-ಕಮಲ ಕಾರ್ಯಕರ್ತರ ಮಧ್ಯೆ ಮಾರಾಮಾರಿ ನಡೆದು ಹಲವರು ಗಾಯಗೊಂಡಿದ್ದಾರೆ.
ಚುನಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಈಡಗ ಮಠದ ಕಾರ್ಯದರ್ಶಿ ಮೇಲೆ ಬಿಜೆಪಿಯವರು ಹಲ್ಲೆ ನಡೆಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹಾಲಪ್ಪನವರು ರಾಜೀ ಮಾಡಲು ಹೋಗಿದ್ದರು.
ಈ ಸಂದರ್ಭದಲ್ಲಿ ಉಭಯ ಪಕ್ಷಗಳ ಕಾರ್ಯಕರ್ತರಲ್ಲಿ ಮಾತಿಗೆ ಮಾತು ಬೆಳೆದು ಮಾರಾಮಾರಿ ನಡೆದಿದೆ. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸುದ್ದಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ತೆರಳಿ ಪರಿಸ್ಥಿತಿ ತಿಳಿಸಿಗೊಳಿಸಿದ್ದಾರೆ. ಘಟನೆ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.