ಶ್ರೀಲಂಕಾದಲ್ಲಿ ಬಾಂಬ್ ದಾಳಿಗೆ ಭಾರತ ಖಂಡನೆ: ಭಾರತೀಯರ ನೆರವಿಗೆ ಸಹಾಯವಾಣಿ

ನವದೆಹಲಿ: ಶ್ರೀಲಂಕಾದಲ್ಲಿ ನಡೆದ ಉಗ್ರರ ಅಟ್ಟಹಾಸದಲ್ಲಿ 140ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಉಗ್ರರ ಕೃತ್ಯವನ್ನು ತೀವ್ರವಾಗಿ ಖಂಡಿಸಿರುವ ಭಾರತ, ನೆರವಿಗಾಗಿ ಸಹಾಯವಾಣಿ ತೆರೆದಿದೆ.

ಶ್ರೀಲಂಕಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯರು ವಾಸವಾಗಿದ್ದಾರೆ. ಹೀಗಾಗಿ ಈ ಭೀಕರ ಸ್ಫೋಟದಿಂದ ಭಾರದಲ್ಲಿಯೂ ಆತಂಕ ಸೃಷ್ಟಿಯಾಗಿದೆ.

ಘಟನೆಯನ್ನು ಖಂಡಿಸಿರುವ ಭಾರತೀಯ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಕೊಲಂಬೊದಲ್ಲಿರುವ ಭಾರತೀಯ ಹೈ ಕಮಿಷನರ್ ಜತೆ ನಿರಂತರ ಸಂಪರ್ಕದಲ್ಲಿದ್ದು, ಅಲ್ಲಿನ ಸ್ಥಿತಿಗತಿಗಳ ಬಗ್ಗೆ ನಿಗಾ ವಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸುಷ್ಮಾ ಸ್ವರಾಜ್, ಅಲ್ಲಿನ ಭಾರತೀಯರ ನೆರವಿಗಾಗಿ ಸಹಾಯವಾಣಿ ಸಹ ತೆರೆಯಲಾಗಿದೆ ಎಂದಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ