ಶ್ರೀಲಂಕಾದ ಚರ್ಚ್​, ಹೋಟೆಲ್​ಗಳಲ್ಲಿ ಸರಣಿ ಬಾಂಬ್​ ಸ್ಫೋಟ; 99 ಸಾವು, 450ಕ್ಕೂ ಹೆಚ್ಚು ಮಂದಿಗೆ ಗಾಯ

ಕೊಲಂಬೋ: ಈಸ್ಟರ್​ ಆಚರಣೆ ವೇಳೆ ಶ್ರೀಲಂಕಾ ರಾಜಧಾನಿ ಕೊಲಂಬೋದ ಚರ್ಚ್​ ಹಾಗೂ ಸ್ಟಾರ್​ ಹೋಟೆಲ್​ಗಳಲ್ಲಿ ಬಾಂಬ್​​ ಸರಣಿ ಸ್ಫೋಟ ಸಂಭವಿಸಿದೆ. ಇದರ ಪರಿಣಾಮ ಈ ದುರ್ಘಟನೆಯಲ್ಲಿ ಕನಿಷ್ಠ 99 ಮಂದಿ ಸಾವನ್ನಪ್ಪಿದ್ದು, 450ಕ್ಕೂ ಅಧಿಕ ಮಂದಿಗೆ ತೀವ್ರವಾಗಿ ಗಾಯಾಗೊಂಡಿದ್ಧಾರೆ.

ಬಟ್ಟಿಕೊಲಾ ಚರ್ಚ್​​ ಸೇರಿ ಮೂರು ಚರ್ಚ್​ಗಳಲ್ಲಿ ಬಾಂಬ್​ ಸ್ಫೋಟ ಸಂಭವಿಸಿದೆ. ಎರಡು ಪಂಚತಾರಾ ಹೋಟೆಲ್​ಗಳಲ್ಲಿ ಸ್ಫೋಟ ಸಂಭವಿಸಿರುವ ಬಗ್ಗೆ ಈಗಾಗಲೇ ವರದಿಯಾಗಿದೆ. ಇನ್ನು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಶ್ರೀಲಂಕಾದಲ್ಲಿ ಒಟ್ಟು 6 ಕಡೆಗಳಲ್ಲಿ ಸರಣಿ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಈ ಪೈಕಿ ಮೂರು ಚರ್ಚ್ ಮತ್ತು ಎರಡು ಹೋಟೆಲ್ ಗಳಲ್ಲಿ ಸರಣಿ ಬಾಂಬ್​ ಸ್ಫೋಟವಾಗಿದೆ. ಅಲ್ಲದೇ ಈ ಸರಣಿ ಸ್ಫೋಟದ ಹಿಂದೆ ಯಾವ ಉಗ್ರ ಸಂಘಟನೆ ಕೈವಾಡವಿದೆ ಎಂಬುದು ಇನ್ನಷ್ಟೇ ಪತ್ತೆಯಾಗಬೇಕಿದೆ.

ಈಸ್ಟರ್​ ಆಚರಣೆಯನ್ನೇ ಗುರಿಯಾಗಿಸಿಕೊಂಡು ದಾಳಿ ನಡೆದಿದೆ. ಈ ಸ್ಫೋಟದ ಹಿಂದೆ ಯಾರಿದ್ದಾರೆ ಎಂದು ಭೇದಿಸಲು ಪೊಲೀಸರು ಮುಂದಾಗಿದ್ಧಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ