ರೆಸಾರ್ಟ್‍ನಲ್ಲಿ ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಲಿರುವ ಸಿ.ಎಂ.

ಉಡುಪಿ, ಏ.22-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾಪುವಿನ ಬಳಿ ಇರುವ ಖಾಸಗಿ ರೆಸಾರ್ಟ್‍ನಲ್ಲಿ ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನಿನ್ನೆ ಅಂತಿಮ ಹಂತದ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡ ನಂತರ ಮುಖ್ಯಮಂತ್ರಿಗಳು ವಿಶ್ರಾಂತಿ ಪಡೆಯುತ್ತಿದ್ದಾರೆ.

ಬುಧವಾರದವರೆಗೂ ಮುಖ್ಯಮಂತ್ರಿಗಳು ವಿಶ್ರಾಂತಿ ಪಡೆಯಲಿದ್ದು, ಅಂದು ಸಂಜೆ ವೇಳೆಗೆ ಬೆಂಗಳೂರಿಗೆ ಮರಳಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಾಯಿರಾಧಾ ರೆಸಾರ್ಟ್‍ನಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮುಖ್ಯಮಂತ್ರಿ ಪಂಚಕರ್ಮ ಚಿಕಿತ್ಸೆ, ಧ್ಯಾನ, ಯೋಗದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ