ಕಾಂಗ್ರೇಸ್-ಬಿಜೆಪಿ ನಾಯಕರ ಆಪ್ತರ ಮನೆ ಮೇಲೆ ಐಟಿ ದಾಳಿ

ಬೆಳಗಾವಿ,ಏ.22- ನಾಳೆ 2ಹಂತದ ಮತದಾನಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೆ ಇಂದೂ ಸಹ ಐಟಿ ಅಧಿಕಾರಿಗಳು ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಆಪ್ತರ ಮನೆಗಳ ಮೇಲೆ ದಾಳಿ ಮುಂದುವರೆಸಿ ಅಪಾರ ಪ್ರಮಾಣದ ಹಣ ಹಾಗೂ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ಮುಂದುವರೆಸಿದ್ದಾರೆ.

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಆಪ್ತ ಎನ್ನಲಾದ ಬೆಳಗಾವಿ ತಾಲೂಕು ಪಂಚಾಯತ್ ಸದಸ್ಯ ಶಂಕರಗೌಡ ಪಾಟೀಲ್ ಮನೆಯ ಮೇಲೆ ಹಾಗೂ ವಿರಕಣಕೊಪ್ಪ ಗ್ರಾಮದ ಫಾರ್ಮ್ ಹೌಸ್ ಮೇಲೆ ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಗೋವಾ ಹಾಗೂ ಬೆಳಗಾವಿ ಐಟಿ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ನಡೆಯುತ್ತಿದೆ. ಇದರ ಬೆನ್ನಲೆ ಬೆಳಗಾವಿ ಬಿಜೆಪಿ ಸಂಸದ ಸುರೇಶ್ ಅಂಗಡಿ ಸಂಬಂಧಿ ಮನೆ ಮೇಲೆ ಐಟಿ ದಾಳಿ ಸಹ ಆಗಿದೆ.ಬೆಳಗಾವಿ ತಾಲೂಕಿನ ಕೆ.ಕೆ.ಕೊಪ್ಪ ಗ್ರಾಮದ ಸುರೇಶ್ ಗೌಡ ಪಾಟೀಲ್ ಮನೆ ಮೇಲೆ ಐಟಿ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿದ್ದು ಪರಿಶೀಲನೆ ವೇಳೆ 4.5ಲಕ್ಷ ನಗದು ಪತ್ತೆಯಾಗಿದೆ. ಸದರಿ ಹಣಕ್ಕೆ ಸುರೇಶ್‍ಗೌಡ ಪಾಟೀಲ್ ದಾಖಲೆ ತೋರಿಸಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಬಳಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಈ ವೇಳೆ ಕಾರಿನಲ್ಲಿ ಸಾಗಿಸುತ್ತಿದ್ದ 14 ಲಕ್ಷ ರೂ. ಹಣ ಪತ್ತೆಯಾಗಿದೆ. ಹಣ ಸಾಗಿಸುತ್ತಿದ್ದ ಶ್ರೀಕಾಂತ ಮುನವಳ್ಳಿಯನ್ನು ಐಟಿ ಅಧಿಕಾರಗಳು ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ