ನವದೆಹಲಿ: ಟೀಮ್ ಇಂಡಿಯಾದ ಮಾಜಿ ಆಟಗಾರ ಗೌತಮ್ ಗಂಭೀರ್ ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ.
ಕೆಲದಿನಗಳ ಹಿಂದಷ್ಟೇ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಗೌತಮ್ ಗಂಭೀರ್ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದು ಖಚಿತವಾಗಿತ್ತು. ಆದರೆ, ಯಾವ ಕ್ಷೇತ್ರ ಎಂಬುದು ಸ್ಪಷ್ಟವಾಗಿರಲಿಲ್ಲ. ಈಗ ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದ್ದು, ಇಂದು ಭರ್ಜರಿ ರೋಡ್ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಅವರು ನಾನು ರಾಷ್ಟ್ರಕ್ಕಾಗಿ ಏನಾದರೂ ಸೇವೆ ಮಾಡಬೇಕು ಎಂದು ನಿರ್ಧರಿಸಿದ್ದೇನೆ. ಈ ಹಿನ್ನೆಲೆಯಲ್ಲಿ ನಾನು ರಾಜಕೀಯ ರಂಗ ಪ್ರವೇಶಿಸುತ್ತಿದ್ದೇನೆ. ಕಳೆದ 5 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿರುವ ಸಾಧನೆಯನ್ನು ಮುಂದುವರಿಸಿಕೊಂಡು ಹೋಗಲು ಬದ್ಧವಾಗಿದ್ದೇನೆ ಎಂದರು.
lok sabha election-2019, Gautam Gambhir,East Delhi,