ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದಿಂದ ಗೌತಮ್ ಗಂಬೀರ್ ನಾಮಪತ್ರ ಸಲ್ಲಿಕೆ

ನವದೆಹಲಿ: ಟೀಮ್​ ಇಂಡಿಯಾದ ಮಾಜಿ ಆಟಗಾರ ಗೌತಮ್​ ಗಂಭೀರ್​ ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ.

ಕೆಲದಿನಗಳ ಹಿಂದಷ್ಟೇ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಗೌತಮ್​ ಗಂಭೀರ್​ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದು ಖಚಿತವಾಗಿತ್ತು. ಆದರೆ, ಯಾವ ಕ್ಷೇತ್ರ ಎಂಬುದು ಸ್ಪಷ್ಟವಾಗಿರಲಿಲ್ಲ. ಈಗ ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದ್ದು, ಇಂದು ಭರ್ಜರಿ ರೋಡ್​ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಅವರು ನಾನು ರಾಷ್ಟ್ರಕ್ಕಾಗಿ ಏನಾದರೂ ಸೇವೆ ಮಾಡಬೇಕು ಎಂದು ನಿರ್ಧರಿಸಿದ್ದೇನೆ. ಈ ಹಿನ್ನೆಲೆಯಲ್ಲಿ ನಾನು ರಾಜಕೀಯ ರಂಗ ಪ್ರವೇಶಿಸುತ್ತಿದ್ದೇನೆ. ಕಳೆದ 5 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿರುವ ಸಾಧನೆಯನ್ನು ಮುಂದುವರಿಸಿಕೊಂಡು ಹೋಗಲು ಬದ್ಧವಾಗಿದ್ದೇನೆ ಎಂದರು.

lok sabha election-2019, Gautam Gambhir,East Delhi,

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ