ಕಾಂಗ್ರೇಸ್ ಗೆಲ್ಲಿಸುವುದೇ ನಮ್ಮ ಗುರಿ-ಲಖನ್ ಜಾರಕಿಹೊಳಿ

ಗೋಕಾಕ್, ಏ.23-ನಾನು ಎಲ್ಲೂ ಹೋಗಿ ಹಾಳಾಗಿಲ್ಲ. ಕಾಂಗ್ರೆಸ್ ಪಕ್ಷದಲ್ಲೇ ಇದ್ದೇನೆ ಎಂದು ಹೇಳುವ ಮೂಲಕ ಸಹೋದರ ರಮೇಶ್ ಜಾರಕಿ ಹೊಳಿಗೆ ಲಖನ್ ಜಾರಕಿ ಹೊಳಿ ಟಾಂಗ್ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಕಾಕ್ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸುವುದೇ ನಮ್ಮ ಗುರಿ. ನನ್ನ ಸಹೋದರ ರಮೇಶ್ ಕಾಂಗ್ರೆಸ್ ಪರ ನಿಂತರಷ್ಟೇ ನಮ್ಮ ಬೆಂಬಲವಿರುತ್ತದೆ ಎಂದು ಹೇಳಿದರು.

ಅವರು ಈಗಾಗಲೇ ಬೇರೆ ಪಕ್ಷಕ್ಕೆ ಹೋಗಿ ಬಂದಿದ್ದಾರೆ. ನಾವು ಕಾಂಗ್ರೆಸ್‍ನಲ್ಲೇ ಇದ್ದೇವೆ. ನಾನು ಎಲ್ಲೂ ಹೋಗಿ ಹಾಳಾಗಿಲ್ಲ. ಸಿದ್ದರಾಮಯ್ಯ ನಮ್ಮ ನಾಯಕರು ಎಂದು ಸ್ಪಷ್ಟಪಡಿಸಿದರು.

ಮತ್ತೊಬ್ಬ ಸಹೋದರ ಸತೀಶ್ ಜಾರಕಿ ಹೊಳಿ ತಲೆಕೆಟ್ಟವರಂತೆ ಮಾತನಾಡುತ್ತಿದ್ದಾರೆ. ಈಗಾಗಲೇ ಒಬ್ಬ ಸಹೋದರನನ್ನು ಹಾಳು ಮಾಡಿದ್ದಾರೆ ಎಂದು ರಮೇಶ್ ಜಾರಕಿ ಹೊಳಿ ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಲಖನ್, ನಾನು ಎಲ್ಲೂ ಹೋಗಿಲ್ಲ, ಹಾಳಾಗಿಯೂ ಇಲ್ಲ ಎಂದು ಟಾಂಗ್ ನೀಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ