ರಾಜೀನಾಮೆ ಖಚಿತ; ಶೀಘ್ರದಲ್ಲೇ ದಿನಾಂಕ ಪ್ರಕಟಿಸುತ್ತೇನೆ ಎಂದ ಶಾಸಕ ರಮೇಶ್ ಜಾರಕಿಹೊಳಿ

ಬೆಳಗಾವಿ: ನಾನು ರಾಜೀನಾಮೆ ನೀಡುವುದು ಖಚಿತ. ತಾಂತ್ರಿಕವಾಗಿ ಕಾಂಗ್ರೆಸ್ ಪಕ್ಷದಲ್ಲಿ ಇದ್ದೇನೆ. ನನಗೆ ಜವಾಬ್ದಾರಿ ಗೊತ್ತಿದೆ. ಕತ್ತಲಲ್ಲಿ ಕುಳಿತು ಕಲ್ಲು ಎಸೆಯುವ ವ್ಯಕ್ತಿ ನಾನಲ್ಲ. ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ.

ಗೋಕಾಕ್ ನಲ್ಲಿ ಮತದಾನ ಮಾಡಿದ ಬಳಿಕ ಮಾತನಾಡಿದ ಅವರು, ದೇಶಕ್ಕೆ ಒಳ್ಳೆಯದಾಗಲಿ ಎಂದು ಮತದಾನ ಮಾಡಿದ್ದೇನೆ. ಕಾಂಗ್ರೆಸ್ ಗೆ ರಾಜೀನಾಮೆ ಬಳಿಕ ಮುಂದಿನ ನಿರ್ಧಾರ ಕೈಗೊಳ್ಲುತ್ತೇನೆ. ಇನ್ನೂ ರಾಜೀನಾಮೆ ನೀಡಿಲ್ಲ. ಶೀಘ್ರವೇ ರಾಜೀನಾಮೆ ನೀಡುವುದಾಗಿ ತಿಳಿಸಿದರು. ಒಬ್ಬ ಸೀನಿಯರ್ ಶಾಸಕನಾಗಿ ಬೇಜವಾಬ್ದಾರಿಯುವ ವ್ಯಕ್ತಿಯಾಗಿರುವ ಸತೀಶ್ ಜಾರಕಿಹೊಳಿ ತಲೆಕೆಟ್ಟಂತೆ ಮಾತನಾಡಬಾರದು. 5 ಬಾರಿ ಶಾಸಕನಾಗಿರುವ ನಾನು ಜವಾಬ್ದಾರಿಯಿಂದ ಮಾತನಾಡುತ್ತಿದ್ದೇನೆ ಎಂದು ಸಹೋದರನ ವಿರುದ್ಧ ವಾಗ್ದಾಳಿ ನಡೆಸಿದರು.

ರಮೇಶ್ ಕತ್ತಿ ಟಿಕೆಟ್ ಕೈ ತಪ್ಪಿ ಮುನಿಸಿಕೊಂಡಾಗ ಯಡಿಯೂರಪ್ಪ ಅವರು ನಾಲ್ಕೈದು ಗಂಟೆಗಳಲ್ಲಿ ಬೆಳಗಾವಿಗೆ ಬಂದು ಸಮಾಧಾನಪಡಿಸಿದರು. ಆದರೆ ಇಲ್ಲಿಯವರೆಗೂ ನನ್ನನ್ನು ಕಾಂಗ್ರೆಸ್ ಪಕ್ಷದವರು ಮಾತನಾಡಿಸಿಲ್ಲ ಎಂದು ಜಾರಕಿಹೊಳಿ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ